ಇಂದು 566 ಪ್ರಕರಣ – ಬೆಂಗಳೂರಿನಲ್ಲಿ 400 ಕೇಸ್, 4 ಸಾವು

Public TV
2 Min Read

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಪಾಸಿಟವ್ ಪ್ರಕರಣಗಳ ಸಂಖ್ಯೆ ಏರಿಕೆ ಕಂಡಿದೆ. ನಿನ್ನೆ 356 ಕೇಸ್ ಪತ್ತೆಯಾಗಿತ್ತು. ಇಂದು 566 ಹೊಸ ಪ್ರಕರಣ ಪತ್ತೆಯಾಗಿದ್ದು, 6 ಮರಣ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 7,771ಕ್ಕೆ ತಲುಪಿದೆ. ಬೆಂಗಳೂರಿನಲ್ಲಿ ಬರೋಬ್ಬರಿ 400 ಪಾಸಿಟಿವ್ ಕೇಸ್ ಪತ್ತೆಯಾಗಿದೆ.

ಇಂದು ಒಟ್ಟು 245 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 30,05,798 ಮಂದಿಗೆ ಕೊರೊನಾ ಬಂದಿದೆ. 39,59,674 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.1.06 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.52 ರಷ್ಟಿದೆ. ಇಂದು ಯಾವುದೇ ಓಮಿಕ್ರಾನ್ ಪ್ರಕರಣ ಕಂಡು ಬಂದಿಲ್ಲ. ಇದನ್ನೂ ಓದಿ: ಹೊಟ್ಟೆಯಲ್ಲಿ 1 ಕೆ.ಜಿ ಕೊಕೇನ್ ಬಚ್ಚಿಟ್ಟು ಪ್ರಯಾಣ – ವಿದೇಶಿ ಮಹಿಳೆ ಅರೆಸ್ಟ್

ಬೆಂಗಳೂರಿನಲ್ಲಿ 499 ಪಾಸಿಟಿವ್ ಕೇಸ್ ಮತ್ತು 4 ಮರಣ ಪ್ರಕರಣ ದಾಖಲಾಗಿದೆ. ಇದು ಆತಂಕ ತರಿಸಿದೆ. ರಾಜ್ಯದಲ್ಲಿ ಇಂದು ಒಟ್ಟು 4,09,604 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,08,726 ಸ್ಯಾಂಪಲ್ (ಆರ್‌ಟಿಪಿಸಿಆರ್ 86,794 + 21,932 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಪುನೀತ್ ಪ್ರೇರಣೆ – ಚಾಮರಾಜನಗರದಲ್ಲಿ ಇದುವರೆಗೆ 9,500 ಮಂದಿ ನೇತ್ರದಾನಕ್ಕೆ ನೋಂದಣಿ

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 3, ಬೆಂಗಳೂರು ನಗರ 400, ಬೀದರ್ 0, ಚಾಮರಾಜನಗರ 1, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 1, ಚಿತ್ರದುರ್ಗ 2, ದಕ್ಷಿಣ ಕನ್ನಡ 33, ದಾವಣಗೆರೆ 2, ಧಾರವಾಡ 7, ಗದಗ 0, ಹಾಸನ 31, ಹಾವೇರಿ 0, ಕಲಬುರಗಿ 3, ಕೊಡಗು 14, ಕೋಲಾರ 14, ಕೊಪ್ಪಳ 0, ಮಂಡ್ಯ 9, ಮೈಸೂರು 9, ರಾಯಚೂರು 0, ರಾಮನಗರ 0, ಶಿವಮೊಗ್ಗ 1, ತುಮಕೂರು 8, ಉಡುಪಿ 17, ಉತ್ತರ ಕನ್ನಡ 2, ವಿಜಯಪುರ 1 ಮತ್ತು ಯಾದಗಿರಿಯಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *