ರಾಜ್ಯದಲ್ಲಿ 592 ಹೊಸ ಕೋವಿಡ್ ಪ್ರಕರಣ – 889 ಮಂದಿ ಡಿಸ್ಚಾರ್ಜ್

Public TV
1 Min Read

ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 592 ಹೊಸ ಕೊರೊನಾ ಪ್ರಕರಣ ದಾಖಲಾಗಿದ್ದು, ನಿನ್ನೆಗಿಂತ ಸ್ವಲ್ಪ ಏರಿಕೆಯಾಗಿದೆ. ಆದರೂ ಕಳೆದ ತಿಂಗಳಿಗೆ ಹೋಲಿಸಿದರೆ ರಾಜ್ಯಾದ್ಯಂತ ಪ್ರಕರಣಗಳ ಸಂಖ್ಯೆ ಇಳಿಕೆ ಕಾಣಿಸುತ್ತಿದೆ. ಇಂದು ಕೊರೊನಾದಿಂದ ರಾಜ್ಯದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಇಂದು ರಾಜ್ಯದಲ್ಲಿ 889 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 4,573ಕ್ಕೆ ಇಳಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ 355 ಪ್ರಕರಣ ದಾಖಲಾಗಿದ್ದು, ಕಲಬುರಗಿ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಂದೊಂದು ಮರಣ ಪ್ರಕರಣ ದಾಖಲಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು 40,209 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕನ್ನಡ ಬಳಕೆ ಕಡ್ಡಾಯ

ಈವರೆಗೆ ರಾಜ್ಯದಲ್ಲಿ 40,55,822 ಮಂದಿಗೆ ಕೊರೊನಾ ಬಂದಿದೆ. ಒಟ್ಟು 40,10,998 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 27,828 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 18,429 ಸ್ಯಾಂಪಲ್ (ಆರ್‌ಟಿ ಪಿಸಿಆರ್ 11,655 + 6,774 ರ‍್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಮಳೆ; ನಾಳೆ ಬೆಂಗಳೂರು ಪೂರ್ವ ಭಾಗದ ಶಾಲೆಗಳಿಗೆ ರಜೆ

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 2, ಬಳ್ಳಾರಿ 7, ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 13, ಬೆಂಗಳೂರು ನಗರ 355, ಬೀದರ್ 0, ಚಾಮರಾಜನಗರ 10, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 21, ಚಿತ್ರದುರ್ಗ 0, ದಕ್ಷಿಣ ಕನ್ನಡ 19, ದಾವಣಗೆರೆ 0, ಧಾರವಾಡ 6, ಗದಗ 0, ಹಾಸನ 23, ಹಾವೇರಿ 1, ಕಲಬುರಗಿ 1, ಕೊಡಗು 29, ಕೋಲಾರ 5, ಕೊಪ್ಪಳ 3, ಮಂಡ್ಯ 5, ಮೈಸೂರು 35, ರಾಯಚೂರು 0, ರಾಮನಗರ 9, ಶಿವಮೊಗ್ಗ 21, ತುಮಕೂರು 8, ಉಡುಪಿ 3, ಉತ್ತರ ಕನ್ನಡ 7, ವಿಜಯಪುರ 3 ಮತ್ತು ಯಾದಗಿರಿಯಲ್ಲಿ 0 ಪಾಸಿಟಿವ್ ಪ್ರಕರಣ ದಾಖಲಾಗಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *