ಕೋಲಾರ | ವ್ಹೀಲಿಂಗ್‌ ಮಾಡ್ತಿದ್ದ ಐವರು ಪುಂಡರು ಅರೆಸ್ಟ್‌

0 Min Read

ಕೋಲಾರ: ಬೈಕ್‌ ವ್ಹೀಲಿಂಗ್‌ ಮಾಡ್ತಿದ್ದ ಐವರನ್ನು ಮಾಲೂರು (Maluru) ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಬೆಂಗಳೂರು ಮೂಲದ ಸೈಯದ್ ನಹೀಂ, ಮಹಮ್ಮದ್ ಇಂಜುಮಾನ್, ಇಕ್ಬಾಲ್ ಶೇಕ್ ವಿಕ್ರಂ ಹಾಗೂ ಮಹಮ್ಮದ್ ತೋಹಿದ್ ಎಂದು ಗುರುತಿಸಲಾಗಿದೆ. ಇವರೆಲ್ಲ ಮಾಲೂರು ತಾಲೂಕಿನ ಲಕ್ಕೂರು ಗ್ರಾಮದ ಬಳಿ ವ್ಹೀಲಿಂಗ್‌ ಮಾಡುತ್ತಿದ್ದರು. ಆರೋಪಿಗಳು ಬಳಸಿದ್ದ ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಮಾಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಆರೋಪಿಗಳನ್ನು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Share This Article