ಬಾವಿಗೆ ಎಸೆದು 6 ಮಕ್ಕಳ ಹತ್ಯೆಗೈದ ಕ್ರೂರಿ ತಾಯಿ

Public TV
1 Min Read

ಮುಂಬೈ: ಕೌಟುಂಬಿಕ ಕಲಹ ಹಿನ್ನೆಲೆ ಮಹಿಳೆಯೊಬ್ಬಳು ತನ್ನ ಐವರು ಪುತ್ರಿಯರನ್ನು ಸೇರಿದಂತೆ ಆರು ಮಕ್ಕಳು ಬಾವಿಗೆ ಎಸೆದು ಹತ್ಯೆಗೈದಿರುವ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ನಡೆದಿದೆ.

crime

ಮುಂಬೈನಿಂದ ಸುಮಾರು 100 ಕಿಮೀ ದೂರದಲ್ಲಿರುವ ಮಹಾಡ್ ತಾಲೂಕಿನ ಖರಾವಲಿ ಗ್ರಾಮದಲ್ಲಿ ಮಧ್ಯಾಹ್ನ ಈ ಆಘಾತಕಾರಿ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ನಾಗರಿಕರನ್ನು ಕೊಂದಿದ್ದ ಇಬ್ಬರು ಉಗ್ರರ ಹತ್ಯೆ

30 ವರ್ಷದ ಮಹಿಳೆ ಮೇಲೆ ಆಕೆಯ ಗಂಡನ ಮನೆಯವರು ಚಿತ್ರಹಿಂಸೆ ನೀಡಿ ಥಳಿಸಿದ ಹಿನ್ನೆಲೆ ಮಹಿಳೆ ಈ ನಿರ್ಧಾರ ಕೈಗೊಂಡಿದ್ದಾಳೆ. ಅಲ್ಲದೇ ನೀರಿನಲ್ಲಿ ಮುಳುಗಿ ಮೃತಪಟ್ಟ ಎಲ್ಲಾ ಮಕ್ಕಳು 18 ತಿಂಗಳಿಂದ 10 ವರ್ಷದೊಳಗಿನವರಾಗಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸೆ.15ವರೆಗೆ ಪದ್ಮ ಪ್ರಶಸ್ತಿ ನಾಮನಿರ್ದೇಶನ ಮಾಡಿ

Share This Article
Leave a Comment

Leave a Reply

Your email address will not be published. Required fields are marked *