ಬಿಹಾರದಲ್ಲಿ ಕಾರು-ಆಟೋ ಡಿಕ್ಕಿ: 6 ಮಂದಿ ದುರ್ಮರಣ

Public TV
1 Min Read

ಪಾಟ್ನಾ: ಬಿಹಾರದ (Bihar) ಬೇಗುಸರಾಯ್‍ನಲ್ಲಿ ಆಟೋ ಮತ್ತು ಕಾರಿನ ನಡುವೆ ಅಪಘಾತ (Accident) ಸಂಭವಿಸಿ 6 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಇತರ ಮೂವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಮಾರಿಯಾದಿಂದ ಝೆರೊಮೈಲ್ ಕಡೆಗೆ ಪ್ರಯಾಣಿಸುತ್ತಿದ್ದ ಆಟೋ ರತನ್ ಚೌಕ್ ಬಳಿ ಕಾರಿಗೆ ಡಿಕ್ಕಿಯಾಗಿದೆ. ಪರಿಣಾಮ 6 ಜನ ಸಾವನ್ನಪ್ಪಿದ್ದಾರೆ. ಅಪಘಾತದ ಸ್ಥಳದ ವೀಡಿಯೋಗಳನ್ನು ಜನ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ರಸ್ತೆಯ ಮೇಲೆ ಚೆಲ್ಲಾಪಿಲ್ಲಿಯಾದ ಸಂತ್ರಸ್ತರ ರಕ್ತಸಿಕ್ತ ದೇಹಗಳು ವೀಡಿಯೋದಲ್ಲಿ ದಾಖಲಾಗಿವೆ. ಇದನ್ನೂ ಓದಿ: ಅಪಘಾತಕ್ಕೂ ಮುನ್ನ 18,730 ರೂ. ಮದ್ಯ ಕುಡಿದಿದ್ದ ಮಿಹಿರ್‌ ಶಾ – ಮಗ ಮಾಡಿದ ತಪ್ಪಿಗೆ ತಂದೆಗೆ ಜೈಲು!  

ಸಂತ್ರಸ್ತರ ಗುರುತು ಇನ್ನೂ ಪತ್ತೆಯಾಗಿಲ್ಲ. ಸಂತ್ರಸ್ತರ ಗುರುತು ಪತ್ತೆಗೆ ಪೊಲೀಸರು ಕ್ರಮಕೈಗೊಂಡಿದ್ದಾರೆ. ಇದನ್ನೂ ಓದಿ: ಪುಟಿನ್ ಜೊತೆ ಮೋದಿ ಚರ್ಚೆ – ಸೇನೆಯಲ್ಲಿದ್ದ ಭಾರತೀಯರ ಬಿಡುಗಡೆಗೆ ರಷ್ಯಾ ಅಸ್ತು

Share This Article