ಮಣಿಪುರದಲ್ಲಿ ನಿಲ್ಲದ ಸಂಘರ್ಷ – ಕಳೆದ 24 ಗಂಟೆಗಳಲ್ಲಿ ಆರು ಮಂದಿ ಸಾವು

Public TV
1 Min Read

ಇಂಫಾಲ: ಮಣಿಪುರದಲ್ಲಿ (Manipur) ನಡೆಯುತ್ತಿರುವ ಎರಡು ಬುಡಕಟ್ಟು ಸಮುದಾಯಗಳ ನಡುವಿನ ಸಂಘರ್ಷ ಮತ್ತಷ್ಟು ಉಲ್ಬಣಗೊಂಡಿದೆ. ಹಿಂಸಾಚಾರಕ್ಕೆ ಕಳೆದ 24 ಗಂಟೆಯಲ್ಲಿ 6 ಮಂದಿ ಬಲಿಯಾಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಕಲಹ ಪೀಡಿತ ಮಣಿಪುರದಲ್ಲಿ ತಂದೆ-ಮಗ ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ. ಶನಿವಾರ ಮುಂಜಾನೆಯಿಂದ ಬಿಷ್ಣುಪುರ್-ಚುರಚಂದ್‌ಪುರ ಗಡಿ ಪ್ರದೇಶಗಳಲ್ಲಿ ಹಗಲಿಡೀ ನಡೆದ ದಾಳಿಗಳಲ್ಲಿ ಸುಮಾರು 16 ಜನರು ಗಾಯಗೊಂಡಿದ್ದಾರೆ. ಇದನ್ನೂ ಓದಿ: ಪತಿ ಲಂಚ ಪಡೆದಿದ್ದಕ್ಕೆ ಜೈಪುರ ಮೇಯರ್‌ ವಜಾ

ಸೇನೆಯು ಈ ಪ್ರದೇಶದಲ್ಲಿ ಪ್ರಮುಖ ಕೂಂಬಿಂಗ್ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಈ ವೇಳೆ ಗುಂಡೇಟಿನಿಂದ ಗಾಯಗೊಂಡಿದ್ದ ದಂಗೆಕೋರನನ್ನು ಸೇನೆ ಬಂಧಿಸಿದೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಇಂಫಾಲ್ ಪೂರ್ವ ಮತ್ತು ಇಂಫಾಲ್ ಪಶ್ಚಿಮ ಜಿಲ್ಲೆಗಳಲ್ಲಿ ಇಂದು ಯಾವುದೇ ಕರ್ಫ್ಯೂ ಸಡಿಲಿಕೆ ಇರುವುದಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಚೆನ್ನೈನ ಬೈಕ್ ರೇಸ್‌ನಲ್ಲಿ ಅಪಘಾತ – ಬೆಂಗಳೂರು ಮೂಲದ 13ರ ಪ್ರತಿಭೆ ದುರ್ಮರಣ

ವಿವಿಧ ಜಿಲ್ಲೆಗಳಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದ ನಂತರ ಜಂಟಿ ಪಡೆಗಳು ಕಲಹ ಪೀಡಿತ ರಾಜ್ಯದ ಅಂಚಿನ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆಗಳನ್ನು ನಡೆಸಿವೆ. ಏಳು ಅಕ್ರಮ ಬಂಕರ್‌ಗಳನ್ನು ನಾಶಪಡಿಸಿವೆ ಎಂದು ಮಣಿಪುರ ಪೊಲೀಸರು ತಿಳಿಸಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್