ಸಿರಿಯಾದಲ್ಲಿ ಸ್ಫೋಟ – 6 ಮಂದಿ ಸಾವು, 23 ಜನರಿಗೆ ಗಾಯ

Public TV
1 Min Read

ಡೆಮಾಸ್ಕಸ್: ಸಿರಿಯಾದಲ್ಲಿ (Syria Explosion) ಗುರುವಾರ ರಾತ್ರಿ ಸ್ಫೋಟ ಸಂಭವಿಸಿ ಆರು ಜನರು ಸಾವಿಗೀಡಾಗಿದ್ದು, 23 ಮಂದಿ ಗಾಯಗೊಂಡಿದ್ದಾರೆ.

ಡೆಮಾಸ್ಕಸ್ ಗ್ರಾಮಾಂತರದಲ್ಲಿರುವ ಅಸ್ಸಾಯಿದಾ ಜೈನಾಬ್ ಪಟ್ಟಣವನ್ನು ಗುರಿಯಾಗಿಸಿಕೊಂಡು ಸ್ಫೋಟ ನಡೆಸಲಾಗಿದೆ ಎಂದು ಸಿರಿಯನ್‌ ಅರಬ್‌ ನ್ಯೂಸ್‌ ಏಜೆನ್ಸಿ ವರದಿ ಮಾಡಿದೆ. ಇದನ್ನೂ ಓದಿ: 10 ನಿಮಿಷ ತಡವಾಗಿದ್ದಕ್ಕೆ ರಾಜ್ಯಪಾಲರ ಬಿಟ್ಟುಹೋದ ವಿಮಾನ – ಗೆಹ್ಲೋಟ್‌ ಗರಂ

ಸಯ್ಯಿದಾ ಜೈನಾಬ್‌ನ ಕೌ ಸುಡಾನ್ ಸ್ಟ್ರೀಟ್‌ನಲ್ಲಿ ಟ್ಯಾಕ್ಸಿ ಬಳಿ ಮೋಟಾರ್‌ಸೈಕಲ್ ಅನ್ನು ಸ್ಫೋಟಿಸಲಾಯಿತು. ಘಟನೆಯಲ್ಲಿ ಮೃತಪಟ್ಟವರ ದೇಹಗಳನ್ನು ಶವಾಗಾರಕ್ಕೆ ರವಾನಿಸಲಾಗಿದೆ. 23 ಮಂದಿ ಗಾಯಾಳುಗಳನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಪೊಲೀಸರು ಮತ್ತು ಅಧಿಕಾರಿಗಳು ಸ್ಫೋಟದ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ಆಂತರಿಕ ಸಚಿವಾಲಯವು ತಿಳಿಸಿದೆ. ಇದನ್ನೂ ಓದಿ: ಆಫ್ರಿಕಾದ ನೈಜರ್‌ನಲ್ಲಿ ಕ್ಷಿಪ್ರಕ್ರಾಂತಿ – ಸೇನೆಯಿಂದಲೇ ಅಧ್ಯಕ್ಷ ಅರೆಸ್ಟ್‌

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್