ರಸ್ತೆ ಅಪಘಾತದಲ್ಲಿ 6 ತಿಂಗಳ ಮಗು ಸಾವು

Public TV
0 Min Read

ಮೈಸೂರು: ರಸ್ತೆ ಅಪಘಾತದಲ್ಲಿ 6 ತಿಂಗಳ ಮಗು ಮೃತಪಟ್ಟಿರುವ ಘಟನೆ ಮೈಸೂರಿನ ಪಿರಿಯಾಪಟ್ಟಣದ ಕಂಪಲಾಪುರ ಗ್ರಾಮದಲ್ಲಿ ನಡೆದಿದೆ.

ಹಾರ್ದ್ವಿಕ್ ಮೃತಪಟ್ಟ ಮಗು. ಈ ಅಪಘಾತದಲ್ಲಿ ಹಾರ್ದ್ವಿಕ್ ತಂದೆ ಮಧು ಹಾಗೂ ತಾಯಿ ಅರ್ಪಿತಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಮಧು ಹಾಗೂ ಅರ್ಪಿತಾ ಹುಣಸೂರಿನ ಅತ್ತಿಗುಪ್ಪೆ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ.

ಮಧು, ಅರ್ಪಿತಾ ಹಾಗೂ ಹಾರ್ದ್ವಿಕ್ ಸತ್ಯಗಾಲದಿಂದ ಹಬ್ಬ ಮುಗಿಸಿ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಹಾರ್ದ್ವಿಕ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಈ ಬಗ್ಗೆ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *