ಮೈಸೂರು | ದರ್ಗಾಗೆ ಬಂದಿದ್ದಾಗ ಅವಘಡ – ಕಾವೇರಿ ನದಿಗೆ ಇಳಿದಿದ್ದ 6 ಮಂದಿ ಜಲಸಮಾಧಿ

1 Min Read

ಮೈಸೂರು: ಈಜಲು ಕಾವೇರಿ ನದಿಗೆ ಇಳಿದಿದ್ದ 6 ಮಂದಿ ಜಲಸಮಾಧಿಯಾಗಿರುವ ಘಟನೆ ಕೆ.ಆರ್ ನಗರದ ಅರ್ಕೇಶ್ವರ ದೇಗುಲದ (KR Nagar Arkeshwara Temple) ಬಳಿ ನಡೆದಿದೆ.

ದರ್ಗಾಕ್ಕೆ ಬಂದಿದ್ದ ಮುಸ್ಲಿಂ ಕುಟುಂಬದ (Muslim Family) 8 ಜನರು ನದಿಗೆ ಇಳಿದಿದ್ದರು. ಈ ವೇಳೆ ನೀರಿನ ರಭಸಕ್ಕೆ ಸಿಲುಕಿ 6 ಮಂದಿ ಜಲಸಮಾಧಿಯಾಗಿದ್ದಾರೆ. ಉಳಿದ ಇಬ್ಬರನ್ನ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಇದನ್ನೂ ಓದಿ: ಮಹಿಳೆ ಅನುಮಾನಾಸ್ಪದ ಸಾವು – ಪರಸ್ತ್ರೀ ಸಹವಾಸದಿಂದ ಹತ್ಯೆಗೈದ್ನಾ ಪತಿ?

ಯಾಸಿನ್ (23), ಫಾತಿಮ್ (30), ನೇಹಾನ್(19), ಅಲೀಂ (13), ಹುಮಾಯೂನ್ (7), ವರ್ಷ ಮೃತ ದುರ್ದೈವಿಗಳೆಂದು ಗುರುತಿಸಲಾಗಿದೆ. ಘಟನೆ ಬಗ್ಗೆ ಮಾಹಿತಿ ಪಡೆದ ಕೆ.ಆರ್‌ ನಗರ ಪೊಲೀಸರು (KR Nagara Police) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದನ್ನೂ ಓದಿ: ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ

Share This Article