ಹಾಸನದಲ್ಲಿ ಕಾರು, ಟ್ರಕ್ ನಡುವೆ ಭೀಕರ ಅಪಘಾತ – ಚಿಕ್ಕಬಳ್ಳಾಪುರ ಮೂಲದ 6 ಮಂದಿ ದಾರುಣ ಸಾವು

Public TV
1 Min Read

ಹಾಸನ: ಕಾರು (Car) ಹಾಗೂ ಟ್ರಕ್ (Truck) ನಡುವೆ ಭೀಕರ ಅಪಘಾತ (Accident) ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಆರು ಮಂದಿ ಸಾವನ್ನಪ್ಪಿದ ಘಟನೆ ಹಾಸನ (Hassan) ಹೊರವಲಯದ ಈಚನಹಳ್ಳಿ ಬಳಿ ನಡೆದಿದೆ.

ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ, ಚೇತನ್ ಹಾಗೂ ರಾಕೇಶ್ ಘಟನೆಯಲ್ಲಿ ದಾರುಣ ಸಾವನ್ನಪ್ಪಿದ್ದಾರೆ. ಮೃತರು ಹೊಸಕೋಟೆ ತಾಲೂಕಿನ ಅಂದರಹಳ್ಳಿ ಹಾಗೂ ದೇವನಹಳ್ಳಿ ಬಳಿಯ ಕಾರಹಳ್ಳಿ ಮೂಲದವರು ಎಂದು ತಿಳಿದು ಬಂದಿದೆ. ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಹಾರಿ ಕಂಟೇನರ್‌ಗೆ ಗುದ್ದಿದ ಪರಿಣಾಮ ಘಟನೆ ಸಂಭವಿಸಿದೆ. ಇದನ್ನೂ ಓದಿ: ದೆಹಲಿ ಮಕ್ಕಳ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ದುರಂತ -6 ನವಜಾತ ಶಿಶುಗಳು ಬಲಿ

ಇಬ್ಬರು ಮಹಿಳೆಯರು, ಮೂರು ಪುರುಷರು ಹಾಗೂ ಒಂದು ಮಗು ಸೇರಿ ಒಟ್ಟು ಆರು ಜನ ಸಾವನ್ನಪ್ಪಿದ್ದಾರೆ. ಮೃತರು ಚಿಕ್ಕಬಳ್ಳಾಪುರ (Chikkaballapura) ಮೂಲದವರಾಗಿದ್ದು, ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ನೋಡಲು ಕುಟುಂಬ ಸಮೇತರಾಗಿ ತೆರಳಿದ್ದರು. ಅಲ್ಲಿಂದ ವಾಪಸ್ ಊರಿಗೆ ಮರಳುವಾಗ ನಿದ್ರೆ ಮಂಪರಿನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಇಂದು ಚೆನ್ನೈನಲ್ಲಿ ರೈಡರ್ಸ್ vs ರೈಸರ್ಸ್ ಫೈನಲ್ ಹಣಾಹಣಿ – ಈ ಸಲ ಕಪ್ ಯಾರಿಗೆ?

ಮೃತದೇಹಗಳನ್ನು ಹೊರಗೆ ತೆಗೆಯಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಸ್ಥಳಕ್ಕೆ ಎಸ್ಪಿ ಮಹಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರು ಚಿಕ್ಕಬಳ್ಳಾಪುರ ಆರ್‌ಟಿಒ ವ್ಯಾಪ್ತಿಯದ್ದಾಗಿದ್ದು, ಮಾಲೀಕ ಮನೋಜ್ ಕುಮಾರ್ ಹೆಸರಿನಲ್ಲಿದೆ. ಹಾಸನ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಚನ್ನಗಿರಿ ಠಾಣೆಯ ಮೇಲೆ ಕಲ್ಲು ತೂರಾಟ – 11 ಮಂದಿ ವಶಕ್ಕೆ

Share This Article