ಠಾಣೆಗೆ ನುಗ್ಗಿದ 60 ಮಂದಿ ಗುಂಪು – ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಡಕಾಯಿತನ ರಿಲೀಸ್

Public TV
1 Min Read

ಭೋಪಾಲ್: 60ಕ್ಕೂ ಹೆಚ್ಚು ಜನರನ್ನೊಳಗೊಂಡ ಗುಂಪೊಂದು ಪೊಲೀಸ್ ಠಾಣೆಗೆ (Police Station) ನುಗ್ಗಿ ಡಕಾಯಿತ (Dacoit) ಸೇರಿದಂತೆ ಮೂವರು ಬಂಧಿತರನ್ನು ಬಿಡುಗಡೆ (Release) ಮಾಡಿದ್ದಲ್ಲದೇ ಪೊಲೀಸ್ ಅಧಿಕಾರಿಗಳ ಮೇಲೂ ಹಲ್ಲೆ (Attack) ನಡೆಸಿದ ಘಟನೆ ಮಧ್ಯಪ್ರದೇಶದಲ್ಲಿ (Madhya Pradesh) ನಡೆದಿದೆ.

ಶುಕ್ರವಾರ ಮುಂಜಾನೆ 3 ಗಂಟೆಯ ಸುಮಾರಿಗೆ ನೇಪಾನಗರದ (Nepanagar) ಪೊಲೀಸ್ ಠಾಣೆಗೆ ನುಗ್ಗಿದ ಗುಂಪು, ಕರ್ತವ್ಯ ನಿರತ ಪೊಲೀಸರ ಮೇಲೆ ದಾಳಿ ಮಾಡಿ ಗಾಯಗೊಳಿಸಿದ್ದಲ್ಲದೇ ಹಲವಾರು ಪೊಲೀಸ್ ವಾಹನಗಳಿಗೆ ಹಾನಿ ಮಾಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ನಿಷೇಧಿತ ಪಿಎಫ್‍ಐನ ಇಬ್ಬರು ಮುಖಂಡರ ಬಂಧನ 

ಹೇಮಾ ಮೇಘವಾಲ್ ಎಂಬ ಡಕಾಯಿತ ಮತ್ತು ಅವನ ಸಹಚರರಾದ ಮಗನ್ ಪಟೇಲ್ ಮತ್ತು ಇನ್ನೋರ್ವ ಯುವಕನನ್ನು ಈ ತಂಡವು ಲಾಕಪ್‌ನಿಂದ (Lock Up) ಬಿಡುಗಡೆಗೊಳಿಸಿದೆ. ಮೇಘವಾಲ್ ಅವರನ್ನು ಕೆಲವು ದಿನಗಳ ಹಿಂದಷ್ಟೇ ಬಂಧಿಸಲಾಗಿತ್ತು ಎಂದು ಬುರ್ಹಾನ್‌ಪುರ (Burhanpur) ಪೊಲೀಸ್ ವರಿಷ್ಠಾಧಿಕಾರಿ (SP) ರಾಹುಲ್ ಕುಮಾರ್ ಲೋಧಾ ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿಗೆ ಆಗಮಿಸುತ್ತಿದ್ದ ವಿಮಾನದಲ್ಲಿ ಹುಚ್ಚಾಟ – ತುರ್ತು ನಿರ್ಗಮನ ದ್ವಾರ ತೆಗೆಯಲು ವ್ಯಕ್ತಿ ಪ್ರಯತ್ನ

ದಾಳಿಯ ಮಾಹಿತಿ ಪಡೆದ ಜಿಲ್ಲಾಧಿಕಾರಿ ಭವ್ಯಾ ಮಿತ್ತಲ್ ಹಾಗೂ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ದಾಳಿಕೋರರನ್ನು ಗುರುತಿಸಲು ಸಿಸಿಟಿವಿ (CCTV) ದೃಶ್ಯಾವಳಿಗಳನ್ನು ಪರೀಕ್ಷಿಸುವಂತೆ ಪೊಲೀಸರಿಗೆ ತಿಳಿಸಿದರು. ಇದನ್ನೂ ಓದಿ: ಅಪ್ರಾಪ್ತೆಯ ಅತ್ಯಾಚಾರ- ಕೃತ್ಯದ ವೇಳೆ ಬಳಸಿದ್ದ ಶರ್ಟ್ ಬಣ್ಣದಿಂದ ಆರೋಪಿ ಅರೆಸ್ಟ್ 

CRIME 2

ಘಟನೆಯಲ್ಲಿ ಗಾಯಗೊಂಡ ನಾಲ್ವರು ಪೊಲೀಸರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 307, 353 ಮತ್ತು ಇತರ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: 2 ತಿಂಗಳಿಂದ ನನ್ನ ಮಕ್ಕಳು ಕಾಣ್ತಿಲ್ಲ: ಸಿಎಂ, ಗೃಹ ಸಚಿವರಿಗೆ ಪತ್ರ ಬರೆದ ಅವಳಿ ಸಹೋದರಿಯರ ತಂದೆ

Share This Article