5ರ ಬಾಲಕಿ ಮೇಲೆ ಅತ್ಯಾಚಾರ ಎಸಗಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ 60ರ ವ್ಯಕ್ತಿ

Public TV
1 Min Read

ಲಕ್ನೋ: 60 ವರ್ಷದ ವ್ಯಕ್ತಿಯೊಬ್ಬ 5 ವರ್ಷದ ಬಾಲಕಿ (Girl) ಮೇಲೆ ಅತ್ಯಾಚಾರ (Rape) ಎಸಗಿ ನಂತರ ತಾನು ನೇಣು ಬಿಗಿದು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಬರೇಲಿ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.

ಶೇರ್ ಮೊಹಮ್ಮದ್ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಬಳಿಕ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಫರೀದ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿ ತನ್ನ ಮನೆಯ ಹೊರಗೆ ಆಟವಾಡಲು ಹೋಗಿದ್ದು, ಎಷ್ಟೇ ಹೊತ್ತಾದರೂ ಬಾರದೇ ಹೋದಾಗ ಆಕೆಯ ಪೋಷಕರು ಹುಡುಕಾಟ ನಡೆಸಿದ್ದಾರೆ. ಈ ಸಂದರ್ಭ ಮೊಹಮ್ಮದ್ ಮನೆ ತಲುಪಿದಾಗ ಬಾಲಕಿಗೆ ಬಲವಂತಪಡಿಸುವುದನ್ನು ನೋಡಿದ್ದಾಗಿ ಪೋಷಕರು ತಿಳಿಸಿದ್ದಾರೆ. ಬಾಲಕಿಯ ಕುಟುಂಬಸ್ಥರನ್ನು ಆರೋಪಿ ಮೊಹಮ್ಮದ್ ನೋಡಿದ ತಕ್ಷಣ ಆತ ಅಲ್ಲಿಂದ ಪರಾರಿಯಾಗಿದ್ದಾನೆ. ರಕ್ತಸಿಕ್ತ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಪೋಷಕರು ತಕ್ಷಣವೇ ಜಿಲ್ಲಾಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಇದನ್ನೂ ಓದಿ: ಗರ್ಭಿಣಿ ಸಾವಿಗೆ ವೈದ್ಯರ ನಿರ್ಲಕ್ಷ್ಯ ಸಾಬೀತು – 11 ಲಕ್ಷ ದಂಡ

ನಡೆದ ಘಟನೆ ಬಗ್ಗೆ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಶೇರ್ ಮೊಹಮ್ಮದ್ ವಿರುದ್ಧ ಅತ್ಯಾಚಾರ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಳಿಕ ಆರೋಪಿಯನ್ನು ಪತ್ತೆ ಮಾಡಲು ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಆದರೆ ಆರೋಪಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿ ಮೇಲೆ ಅತ್ಯಾಚಾರ ಎಸಗಿ ಸಿಕ್ಕಿಬಿದ್ದ ಬಳಿಕ ಪೊಲೀಸರ ಕಠಿಣ ಕ್ರಮಕ್ಕೆ ಹೆದರಿ ಇಲ್ಲವೇ ಪಶ್ಚಾತ್ತಾಪದಿಂದ ಮೊಹಮ್ಮದ್ ಮರಕ್ಕೆ ನೇಣು ಬಿಗಿದುಕೊಂಡಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿಕ್ಕಿಂ ಹಠಾತ್ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 53ಕ್ಕೆ ಏರಿಕೆ – 140 ಮಂದಿ ಕಣ್ಮರೆ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್