666 ಆಪರೇಷನ್ ಡ್ರೀಮ್ ಥಿಯೇಟರ್ (666 Operation Dream Theatre) ಸಿನಿಮಾದಲ್ಲಿ ಧನಂಜಯ್ (Dhananjaya) ಅವರ ಎರಡು ಲುಕ್ ಬಿಡುಗಡೆ ಮಾಡಿ ಪ್ರೇಕ್ಷಕರನ್ನು ಒಂಟಿಗಾಲಲ್ಲಿ ನಿಲ್ಲಿಸಿದ್ದ ಚಿತ್ರತಂಡವೀಗ ಶಿವಣ್ಣ (Shivaraj Kumar) ಅವರ ಫಸ್ಟ್ ಲುಕ್ ಅನಾವರಣ ಮಾಡಿದೆ.
666 ಆಪರೇಷನ್ ಡ್ರೀಮ್ ಥಿಯೇಟರ್‌ನಲ್ಲಿ ಶಿವಣ್ಣ ಹೊಸ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಸೂಟ್ ಧರಿಸಿ, ಕೈಯಲ್ಲಿ ವಿಂಟೇಜ್ ರಿವಾಲ್ವರ್ ಹಿಡಿದು ಹಿಡಿದು ತೀಕ್ಷ ನೋಟದೊಂದಿಗೆ ಹೆಜ್ಜೆ ಹಾಕುತ್ತಾ ಸ್ಟೈಲೀಶ್ ಆಗಿರುವ ಪಾತ್ರವನ್ನು ತಂಡ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಬಿಡುಗಡೆ ಮಾಡಿದೆ. ಶಿವಣ್ಣ ಲುಕ್ ನೋಡ್ತಿದ್ರೆ ಡಾ.ರಾಜ್ ಕುಮಾರ್ ಅವರ 999 ರ ಬ್ಲಾಕ್ಬಸ್ಟರ್ ಸ್ಪೈ ಚಿತ್ರಗಳ ರೀತಿಯೇ ಅವರು ಕೂಡ ಸ್ಪೈ ಪಾತ್ರ ಮಾಡುತ್ತಿದ್ದಾರೆ ಎಂಬ ಸುಳಿವನ್ನು ಚಿತ್ರತಂಡ ಬಿಟ್ಟುಕೊಟ್ಟಿದೆ.
ಶಿವಣ್ಣ ಪ್ರತಿ ಸಿನಿಮಾದಲ್ಲಿಯೂ, ಪ್ರತಿ ಪಾತ್ರದಲ್ಲಿಯೂ ಹೊಸತನ ನೀಡುತ್ತಾರೆ. ಅಂತೆಯೇ 666 ಆಪರೇಷನ್ ಡ್ರೀಮ್ ಥಿಯೇಟರ್‌ನಲ್ಲಿ ಅವರ ಪಾತ್ರ ಪ್ರೇಕ್ಷಕರಿಗೆ ಎಂದು ಮರೆಯಲಾಗದ ಅನುಭವ ನೀಡಲಿದೆ. 666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾ ರೆಟ್ರೋ ಕಥೆಯನ್ನು ಒಳಗೊಂಡಿದ್ದು, ಹೇಮಂತ್ ಎಂ ರಾವ್ ಸಾರಥ್ಯದಲ್ಲಿ ಚಿತ್ರ ನಿರ್ದೇಶನವಾಗುತ್ತಿದೆ.
ಡಾ. ವೈಶಾಕ್ ಜೆ ಗೌಡ ಅವರ ವೈಶಾಕ್ ಜೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾಗುತ್ತಿರುವ 666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾಗೆ ಚರಣ್ ರಾಜ್ ಸಂಗೀತ, ಅದ್ವೈತ ಗುರುಮೂರ್ತಿ ಹಾಗೂ ವಿಶ್ವಾಸ್ ಕಶ್ಯಪ್ ನಿರ್ಮಾಣ ವಿನ್ಯಾಸ , ಇಂಚರಾ ಸುರೇಶ್ ಕಾಸ್ಟೈಮ್ ಡಿಸೈನ್ ಚಿತ್ರಕ್ಕಿದೆ. ಸದ್ಯ ಶಿವಣ್ಣ ಹಾಗೂ ಧನಂಜಯ್ ಅವರ ಫಸ್ಟ್ ಲುಕ್ ಬಿಡುಗಡೆ ಮಾಡಿ ಸಿನಿಮಾಪ್ರೇಮಿಗಳಲ್ಲಿ ನಿರೀಕ್ಷೆ ಹೆಚ್ಚಿಸಿರುವ ಚಿತ್ರತಂಡ, ಮುಂದಿನ ದಿನಗಳಲ್ಲಿ ಮತ್ತಷ್ಟು ತಾರಾಬಳಗದ ಬಗ್ಗೆ ಮಾಹಿತಿ ಕೊಡಲಿದೆ.
666 ಆಪರೇಷನ್ ಡ್ರೀಮ್ ಥಿಯೇಟರ್‌ನಲ್ಲಿ ಶಿವರಾಜ್ ಕುಮಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಜುಲೈನಲ್ಲಿ ಚಿತ್ರೀಕರಣ ಪ್ರಾರಂಭವಾಗುವ ನಿರೀಕ್ಷೆಯಿದೆ. ಈ ಚಿತ್ರವನ್ನು ದೊಡ್ಡ ಬಜಟ್‌ನಲ್ಲಿ ನಿರ್ಮಿಸಲಾಗುತ್ತಿದ್ದು, ತೆಲುಗು ಮತ್ತು ಕನ್ನಡದಲ್ಲಿ ಏಕಕಾಲದಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.