ಹಳದಿ ಮಾರ್ಗದ ಮೆಟ್ರೋಗೆ ನಾಳೆ 6ನೇ ರೈಲು ಸೇರ್ಪಡೆ

1 Min Read

– ಪೀಕ್‌ ಅವಧಿಯಲ್ಲಿ 13 ನಿಮಿಷಕ್ಕೆ ಒಂದು ರೈಲು

ಬೆಂಗಳೂರು: ಹಳದಿ ಮಾರ್ಗದ ಮೆಟ್ರೋ (Yellow Line Metro) ಪ್ರಯಾಣಿಕರಿಗೆ ಗುಡ್‌ನ್ಯೂಸ್‌. ಮಂಗಳವಾರ(ಡಿ.23) 6ನೇ ರೈಲು ಸೇರ್ಪಡೆಯಾಗಲಿದೆ.

ಈ ರೈಲಿನ ಸೇರ್ಪಡೆಯೊಂದಿಗೆ ಸೋಮವಾರದಿಂದ ಶನಿವಾರದವರೆಗೆ ಜನದಟ್ಟನೆಯ ಅವಧಿಯಲ್ಲಿ ಮೆಟ್ರೋ ಸೇವೆಗಳು ಪ್ರಸ್ತುತ ಇರುವ 15 ನಿಮಿಷಗಳ ಅಂತರದ ಬದಲು 13 ನಿಮಿಷಗಳ ಅವಧಿಯಲ್ಲಿ ಸಂಚರಿಸಲಿವೆ ಎಂದು ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್‌ (BMRCL) ಹೇಳಿದೆ.

 

ಭಾನುವಾರಗಳಂದು ಪೀಕ್ ಅವಧಿಯ ಸೇವಾ ಅವಧಿ 15 ನಿಮಿಷಗಳಾಗಿಯೇ ಮುಂದುವರಿಯಲಿದೆ. ಆರ್.ವಿ. ರಸ್ತೆ ಹಾಗೂ ಬೊಮ್ಮಸಂದ್ರ ನಿಲ್ದಾಣಗಳ ಎರಡೂ ಟರ್ಮಿನಲ್‌ಗಳಿಂದ ಮೊದಲ ಹಾಗೂ ಕೊನೆಯ ರೈಲುಗಳ ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಇದನ್ನೂ ಓದಿ:  ಕರ್ನಾಟಕಕ್ಕೆ ವಿಶೇಷ ಅನುದಾನ ಬಾಕಿ ಇರಿಸಿಕೊಂಡಿಲ್ಲ: ಕೇಂದ್ರ ಸ್ಪಷ್ಟನೆ

ಆಗಸ್ಟ್ 10 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಹಳದಿ ಮೆಟ್ರೋ ಮಾರ್ಗಕ್ಕೆ ಚಾಲನೆ ನೀಡಿದರು. ಇದು ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರದವರೆಗೆ ಸಂಪರ್ಕ ಕಲ್ಪಿಸುತ್ತದೆ. ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ಹಲವು ಪ್ರದೇಶಗಳಿಗೆ ಅನುಕೂಲವಾಗಿದ್ದು, ಚಾಲಕ ರಹಿತ ರೈಲುಗಳು ಸಂಚರಿಸುತ್ತಿವೆ ಮತ್ತು ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದೆ.
Share This Article