ಅಮೆರಿಕದ ಅಲಾಸ್ಕಾದಲ್ಲಿ 7.3 ತೀವ್ರತೆಯ ಭೂಕಂಪ – ಸುನಾಮಿ ಎಚ್ಚರಿಕೆ

Public TV
1 Min Read

ವಾಷಿಂಗ್ಟನ್: ಅಮೆರಿಕದ (America) ಅಲಾಸ್ಕಾದಲ್ಲಿ (Alaska) ರಿಕ್ಟರ್ ಮಾಪಕದಲ್ಲಿ 7.3 ತೀವ್ರತೆಯ ಭೂಕಂಪ (Earthquake) ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

ಸಮುದ್ರದ 36 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಅಲಾಸ್ಕಾ ಪರ್ಯಾಯ ದ್ವೀಪದ ಸ್ಯಾಂಡ್ ಪಾಯಿಂಟ್‌ನಿಂದ 87 ಕಿ.ಮೀ ದೂರದಲ್ಲಿ ಇದರ ಕೇಂದ್ರ ಬಿಂದು ಇತ್ತು ಎಂದು ಎನ್‌ಸಿಎಸ್ ಮಾಹಿತಿ ನೀಡಿದೆ. ಭೂಕಂಪದ ನಂತರ ದಕ್ಷಿಣ ಅಲಾಸ್ಕಾ ಹಾಗೂ ಪರ್ಯಾಯ ದ್ವೀಪದ ಭಾಗದಲ್ಲಿ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಇದನ್ನೂ ಓದಿ: Hassan | ಮೂಳೆ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಪೊಲೀಸ್ ಕಾನ್ಸ್‌ಟೇಬಲ್ ನೇಣಿಗೆ ಶರಣು

ಸಮುದ್ರದ ಕಡಿಮೆ ಆಳದಲ್ಲಿ ಸಂಭವಿಸಿದ ಭೂಕಂಪ ಇದಾಗಿದ್ದು, ಇಂತಹ ಭೂಕಂಪಗಳು ಹೆಚ್ಚು ಅಪಾಯಕಾರಿಯಾಗಿರುತ್ತವೆ. ಈ ಹಿನ್ನೆಲೆ ಕರಾವಳಿಯ ಜನರು ಎತ್ತರದ ಪ್ರದೇಶಗಳಿಗೆ ಅಥವಾ ಒಳನಾಡಿಗೆ ಸ್ಥಳಾಂತರಗೊಳ್ಳಬೇಕು. ಕಡಲತೀರದಿಂದ ದೂರವಿರಬೇಕು ಎಂದು ಅಮೆರಿಕ ರಾಷ್ಟ್ರೀಯ ಹವಾಮಾನ ಸೇವಾ ಕೇಂದ್ರ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಸರ್ಕಾರಿ ಕಚೇರಿ ನವೀಕರಣಕ್ಕೂ ಅನುದಾನ ಕೊರತೆ – ಸಿಬ್ಬಂದಿಯೇ ದೇಣಿಗೆ ಸಂಗ್ರಹಿಸಿ ಕಚೇರಿ ದುರಸ್ತಿ

Share This Article