ಅಮೆರಿಕದ ಅಲಾಸ್ಕಾ ಬಳಿ 7.4 ತೀವ್ರತೆಯ ಭಾರೀ ಭೂಕಂಪ – ಸುನಾಮಿ ಎಚ್ಚರಿಕೆ

Public TV
1 Min Read

ವಾಷಿಂಗ್ಟನ್: ಅಮೆರಿಕದ (America) ಅಲಾಸ್ಕಾದಲ್ಲಿ (Alaska) ಭಾನುವಾರ 7.4 ತೀವ್ರತೆಯ ಭಾರೀ ಭೂಕಂಪ (Earthquake) ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ. ಭೂಕಂಪ ಸಂಭವಿಸಿದ ಬಳಿಕ ಅಮೆರಿಕದ ಕೆಲವು ರಾಜ್ಯಗಳಲ್ಲಿ ಸುನಾಮಿ ಎಚ್ಚರಿಕೆಯನ್ನು (Tsunami Warning) ನೀಡಲಾಗಿದೆ.

ಅಲಾಸ್ಕಾ ಪೆನಿನ್ಸುಲಾ, ಅಲ್ಯೂಟಿಯನ್ ದ್ವೀಪಗಳು ಹಾಗೂ ಕುಕ್ ಇನ್ಲೆಟ್ ಪ್ರದೇಶಗಳಲ್ಲಿ ಕಂಪನದ ಅನುಭವವಾಗಿದೆ ಎಂದು ಅಲಾಸ್ಕಾ ಭೂಕಂಪ ಕೇಂದ್ರ ತಿಳಿಸಿದೆ. ಭೂಕಂಪದ ಕೇಂದ್ರ ಬಿಂದುವನ್ನು 9.3 ಕಿ.ಮೀ ಆಳದಲ್ಲಿ ಗುರುತಿಸಲಾಗಿದೆ. ಸದ್ಯ ಇಲ್ಲಿಯವರೆಗೆ ಯಾವುದೇ ಸಾವು, ನೋವು, ಹಾನಿಯ ಬಗ್ಗೆ ವರದಿಯಾಗಿಲ್ಲ. ಇದನ್ನೂ ಓದಿ: ಮತ್ತೊಂದು ಕೇಸ್‌ – ಪಬ್ಜಿ ಪ್ರೇಮಿಗಾಗಿ ಭಾರತಕ್ಕೆ ಹಾರಿ ಬಂದ ಬಾಂಗ್ಲಾದೇಶದ ಯುವತಿ!

1964ರಲ್ಲಿ ಅಲಾಸ್ಕಾದಲ್ಲಿ 9.2 ತೀವ್ರತೆಯ ಭಾರೀ ಭೂಕಂಪ ಸಂಭವಿಸಿತ್ತು. ಇದು ಉತ್ತರ ಅಮೆರಿಕದಲ್ಲಿ ಸಂಭವಿಸಿದ ಅತ್ಯಂತ ಪ್ರಬಲ ಭೂಕಂಪವಾಗಿತ್ತು. ಇದು ಆಂಕಾರೇಜ್ ಅನ್ನು ಧ್ವಂಸಗೊಳಿಸಿತ್ತು. ಅಲಾಸ್ಕಾ ಕೊಲ್ಲಿ, ಅಮೆರಿಕದ ಪಶ್ಚಿಮ ಕರಾವಳಿ ಹಾಗೂ ಹವಾಯಿಯಲ್ಲಿ ಸುನಾಮಿಯೂ ಸಂಭವಿಸಿತ್ತು. ಈ ಪ್ರಕೃತಿಕ ವಿಕೋಪಕ್ಕೆ ಅಲ್ಲಿನ 250ಕ್ಕೂ ಹೆಚ್ಚು ಜನರು ಬಲಿಯಾಗಿದ್ದರು. ಇದನ್ನೂ ಓದಿ: 27 ಯುವಕರನ್ನ ಮದುವೆಯಾಗಿ ವಂಚಿಸಿ ಖತರ್ನಾಕ್‌ ಲೇಡಿ ಎಸ್ಕೇಪ್‌ – ಒಬ್ಬಳಿಗಾಗಿ ಪೊಲೀಸ್‌ ಠಾಣೆ ಮೆಟ್ಟಿಲೇರಿದ ಸಂತ್ರಸ್ತರು

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್