Earthquake | ಮ್ಯಾನ್ಮಾರ್‌ನಲ್ಲಿ ಎರಡೆರಡು ಬಾರಿ ಪ್ರಬಲ ಭೂಕಂಪ – ಬ್ಯಾಂಕಾಕ್‌ನಲ್ಲೂ ನಡುಕ

Public TV
2 Min Read

ನೈಪಿಡಾವ್/ಬ್ಯಾಂಕಾಕ್:‌ ಮ್ಯಾನ್ಮಾರ್‌ನಲ್ಲಿಂದು ಎರಡೆರಡು ಬಾರಿ ಪ್ರಬಲ ಭೂಕಂಪ (Myanmar Earthquake) ಸಂಭವಿಸಿದೆ. ಮೊದಲ ಭೂಕಂಪ ಸಂಭವಿಸಿದ 15 ನಿಮಿಷಗಳಲ್ಲೇ ಮತ್ತೊಂದು ಬಾರಿ ಭೂಕಂಪ ಸಂಭವಿಸಿದೆ.

ರಿಕ್ಷರ್‌ ಮಾಪಕದಲ್ಲಿ ಮೊದಲ ಬಾರಿ ಭೂಕಂಪದ ತೀವ್ರತೆ 7.7, 2ನೇ ಬಾರಿಗೆ 6.4 ತೀವ್ರತೆ ದಾಖಲಾಗಿದೆ ಎಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ (USGS) ತಿಳಿಸಿದೆ. ಇದರಿಂದ ಮಯನ್ಮಾರ್ ಗಡಿ ದೇಶವಾಗಿರುವ ಭಾರತದ ನವದೆಹಲಿಯಲ್ಲೂ ಭೂಮಿ ಕಂಪಿಸಿದ ಅನುಭವ ಆಗಿದೆ.

ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಬೆಳಿಗ್ಗೆ 11.50ರ ಸುಮಾರಿಗೆ ಭೂಮಿಯ 10 ಕಿ.ಮೀ ಆಳದಲ್ಲಿ ಈ ಭೂಕಂಪ ಸಂಭವಿಸಿದೆ. ತಕ್ಷಣಕ್ಕೆ ಯಾವುದೇ ಸಾವು ನೋವುಗಳ ವರದಿಯಾಗಿಲ್ಲ. ಅತ್ತ ಬ್ಯಾಂಕಾಕ್‌ನಲ್ಲೂ (Bangkok) ಭೂಕಂಪದ ಎಫೆಕ್ಟ್‌ ತಟ್ಟಿದೆ.

ಮ್ಯಾನ್ಮಾರ್‌ನಲ್ಲಿ ಭೂಕಂಪ ಸಂಭವಿಸಿದ ಎಫೆಕ್ಟ್‌ ಬ್ಯಾಂಕಾಕ್‌ಗೂ ತಟ್ಟಿದೆ. ಬ್ಯಾಂಕಾಕ್ ಹಾಗೂ ಥೈಲ್ಯಾಂಡ್‌ನಲ್ಲೂ ಭೂಮಿ ಕಂಪಿಸಿದ ಅನುಭವ ಆಗಿದೆ. ಕಟ್ಟಡಗಳು ಅಲುಗಾಡಿವೆ, ಕೆಲವಡೆ ಮುಗಿಲೆತ್ತರದ ಕಟ್ಟಗಳು ಧ್ವಂಸವಾದ ದೃಶ್ಯಗಳು ಸೆರೆಯಾಗಿವೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ಸಾಮಾಜಿಕ ಜಾಲತಾಣದಲ್ಲಿ ಭೂಕಂಪದ ತೀವ್ರತೆ ಬಗ್ಗೆ ಮಾಹಿತಿ ನೀಡಿದೆ.

ಬ್ಯಾಂಕಾಕ್‌ನಲ್ಲಿ ಭೂಕಂಪದ ಅನುಭವವಾದ ನಂತರ ಕಟ್ಟಡದ ಮೇಲ್ಛಾವಣಿಯಲ್ಲಿದ್ದ ಟ್ಯಾಂಕ್‌ನಿಂದ ನೀರು ಕೆಳಗೆ ಬೀಳುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ. ಜೊತೆಗೆ ಸ್ವಿಮ್ಮಿಂಗ್‌ ಪೂಲ್‌ನಲ್ಲಿರುವ ನೀರು ಚಿಮ್ಮಿ ಹೊರ ಚೆಲ್ಲುತ್ತಿದೆ. ಹೋಟೆಲ್‌ನಲ್ಲಿ ವಸ್ತುಗಳೆಲ್ಲ ಅಲುಗಾಡುತ್ತಿರುವ ದೃಶ್ಯಗಳನ್ನು ಅಲ್ಲಿನ ಜನ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Share This Article