ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು 7 ಮಂದಿಗೆ ಗಾಯ

Public TV
1 Min Read

ಮಂಗಳೂರು: ನಿರ್ಮಾಣ ಹಂತದಲ್ಲಿದ್ದ ಸೇತುವೆಯೊಂದು ಕುಸಿದು ಬಿದ್ದು (Bridge Collapse) 7 ಮಂದಿಗೆ ಗಾಯಗಳಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುಣಚ ಗ್ರಾಮದಲ್ಲಿ ನಡೆದಿದೆ.

ಪುಣಚ ಗ್ರಾಮದ ಬರೆಂಜ-ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ಈ ಅವಘಡ ಸಂಭವಿಸಿದೆ. ಸೇತುವೆಯ ಕೊನೆಯ ಹಂತದ ಕಾರ್ಯವಾಗಿ ಕಾಂಕ್ರಿಟ್ ಮಿಕ್ಸ್ ಹಾಕುತ್ತಿದ್ದಾಗ ತಳಭಾಗದ ರಾಡ್ ಜಾರಿ ಮೇಲ್ಭಾಗದ ಸಂಪೂರ್ಣ ಕಾಂಕ್ರಿಟ್ ಸ್ಲ್ಯಾಬ್ ಕುಸಿತಗೊಂಡಿದೆ.

ಸೇತುವೆ ಸಾಮಾಗ್ರಿಯ ಮಧ್ಯೆ ಓರ್ವ ಕಾರ್ಮಿಕ ಸಿಲುಕಿ ಗಂಭೀರ ಗಾಯಗೊಂಡಿದ್ದಾರೆ. ಉಳಿದ ಆರು ಮಂದಿಯನ್ನು ರಕ್ಷಿಸಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ (Puttur Government Hospital) ಕರೆದೊಯ್ದು ಚಿಕಿತ್ಸೆ ನಿಡಲಾಗುತ್ತಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ ಮುಂದಿನ 3 ದಿನ ಒಣಹವೆ – ಏ.18 ರಿಂದ ವಿವಿಧೆಡೆ ಮಳೆ

Share This Article