ಕೋಲಾರ: ಶಾಲೆಯ ಆವರಣದ ಪಕ್ಕದಲ್ಲಿದ್ದ ನೇರಳೆ ಹಣ್ಣು (Jamun Fruit) ತಿಂದು 7 ಮಂದಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಪುತ್ರಸೊನ್ನೇನಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಮಧ್ಯಾಹ್ನ ಊಟಕ್ಕೆ ಬಿಟ್ಟಿದ್ದ ವೇಳೆ ಊಟದ ಬಳಿಕ ಶಾಲೆಯ ಆವರಣದಲ್ಲಿದ್ದ ನೇರಳೆ ತಿನ್ನುತ್ತಿದ್ದಂತೆ 7 ಜನ ವಿದ್ಯಾರ್ಥಿಗಳಿಗೆ ವಾಂತಿ, ಭೇದಿಯಾಗಿದೆ. ಕೂಡಲೆ ಎಚ್ಚೆತ್ತ ಪೋಷಕರು ಹಾಗೂ ಶಿಕ್ಷಕರು ಮಕ್ಕಳಿಗೆ ಚಿಕಿತ್ಸೆ ಕೊಡಲು ಮುಂದಾಗಿದ್ದಾರೆ. ಇದನ್ನೂ ಓದಿ: ಬೌಂಡರಿಯಿಂದಲೇ 196 ರನ್ – ವೇಗದ ತ್ರಿಶತಕ ಸಿಡಿಸಿ ದಾಖಲೆ ಬರೆದ ಮುಲ್ಡರ್
ಅದರಂತೆ ಬಂಗಾರಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ 6 ಜನ ವಿದ್ಯಾರ್ಥಿಗಳನ್ನು ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಒರ್ವ ವಿದ್ಯಾರ್ಥಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ವೈದ್ಯರು ಮಕ್ಕಳಿಗೆ ಚಿಕಿತ್ಸೆ ನೀಡುತ್ತಿದ್ದು, ಮಕ್ಕಳನ್ನ ವೈದ್ಯರು ಪರಿವೀಕ್ಷಣೆಯಲ್ಲಿರಿಸಿದ್ದಾರೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಬಿಇಓ ಗುರುಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ನೆಲಮಂಗಲ ಪೊಲೀಸ್ ಠಾಣೆಗೆ ಹಾಜರಾದ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ
ಶಾಲೆಯ ಪಕ್ಕದಲ್ಲಿರುವ ರೈತರು ಅದನ್ನು ಕಡಿದು ಅಲ್ಲಿ ಹಾಕಿದ್ದಾರೆ. ಹಾಗಾಗಿ ಕೆಂಪಾಗಿದ್ದ ನೇರಳೆ ತಿಂದು ಮಕ್ಕಳಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದೆ. ಕೂಡಲೇ ಮಕ್ಕಳನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಮಕ್ಕಳಿಗೆ ಯಾವುದೆ ತೊಂದರೆ ಇಲ್ಲ. ನಾಲ್ಕು ಗಂಟೆ ಮಕ್ಕಳ ಮೇಲೆ ನಿಗಾ ವಹಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ರಂಭಾಪುರಿ ಶ್ರೀಗಳು ಹೇಳಿದ ಮಾತು ನಿಜ ಆಗುತ್ತೆ, ಭಗವಂತನೇ ಶ್ರೀಗಳ ಬಾಯಲ್ಲಿ ಇದನ್ನು ಹೇಳಿಸಿರಬಹುದು: ಇಕ್ಬಾಲ್ ಹುಸೇನ್