ಚಿಪ್ಸ್ ಖರೀದಿಸಲು ಅಂಗಡಿಗೆ ತೆರಳಿದ್ದ 7ರ ಬಾಲಕಿ ಮೇಲೆ ಕಾಮುಕನ ಅಟ್ಟಹಾಸ

Public TV
1 Min Read

ಬೆಂಗಳೂರು: ಚಿಪ್ಸ್ ಖರೀದಿಸಲು ಅಂಗಡಿಗೆ ತೆರಳಿದ್ದ 7 ವರ್ಷದ ಬಾಲಕಿಯ ಮೇಲೆ ಕಾಮುಕ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಬಗಲಗುಂಟೆ (Bagalkunte) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಇದನ್ನೂ ಓದಿ: ಸಾಲ ವಾಪಸ್‌ ಕೇಳಿದ್ದಕ್ಕೆ ಪೆಟ್ರೋಲ್‌ ಸುರಿದು ಮನೆಗೆ ಬೆಂಕಿ ಹಚ್ಚಿದ ಭೂಪ!

ಕೃತ್ಯ ಎಸಗಿದ 20 ವರ್ಷದ ಆರೋಪಿಯನ್ನು ಕೇರಳ ಮೂಲದವನು ಎನ್ನಲಾಗಿದೆ. ಆತ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಅದೇ ಅಂಗಡಿಗೆ ಬಾಲಕಿ ಚಿಪ್ಸ್ ಖರೀದಿಸಲು ತೆರಳಿದ್ದಳು. ಈ ವೇಳೆ ಗೋಡೌನ್‌ನಲ್ಲಿ ಚಿಪ್ಸ್ ಕೊಡುವುದಾಗಿ ತಿಳಿಸಿ ಆಕೆಯನ್ನು ಕರೆದುಕೊಂಡು ಹೋಗಿದ್ದ. ಬಳಿಕ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿ ಬಂದಿದೆ.

ಸದ್ಯ ಈ ಸಂಬAಧ ಬಾಲಕಿ ಪೋಷಕರು ಬಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಇದನ್ನೂ ಓದಿ: ಮದ್ವೆಯಾದ ಹತ್ತೇ ದಿನಕ್ಕೆ ಪತ್ನಿಯ ತಾಳಿ, ಅಮ್ಮನ ಒಡವೆ ಅಡವಿಟ್ಟು 20 ಲಕ್ಷ ಲಂಚ – APMC ವಿರುದ್ಧ ಭ್ರಷ್ಟಾಚಾರದ ಆರೋಪ

Share This Article