ಲಾಕ್‍ಡೌನ್ ವೇಳೆಯಲ್ಲಿ ನಡೆಯುತ್ತಿದ್ದ 70 ಬಾಲ್ಯ ವಿವಾಹಗಳಿಗೆ ಬ್ರೇಕ್

Public TV
2 Min Read

-ಕೊರೊನಾ ಎರಡನೇಯ ಅಲೆಯಲ್ಲಿ 13 ಬಾಲ್ಯ ವಿವಾಹಗಳಿಗೆ ಬ್ರೇಕ್

ಬೀದರ್/ಯಾದಗಿರಿ: ಕೊರೊನಾ ಎರಡನೇ ಅಲೆಯ ಲಾಕ್‍ಡೌನ್ ಸಮಯದಲ್ಲಿ ಯಾದಗಿರಿಯಲ್ಲಿ ಒಟ್ಟು 72 ಬಾಲ್ಯ ವಿವಾಹಗಳ ಪ್ರಕರಣ ದಾಖಲಾಗಿದ್ದು, ಅದರಲ್ಲಿ 70 ಮದುವೆಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಬ್ರೇಕ್ ಹಾಕಿದ್ದಾರೆ.

2 ಪ್ರಕರಣಗಳಲ್ಲಿ ಇಬ್ಬರ ವಯಸ್ಸು ಸರಿಯಿದ್ದ ಕಾರಣ ಮದುವೆಗೆ ಅನುಮತಿ ನೀಡಲಾಗಿದೆ. ಯಾವುದೇ ಬಾಲ್ಯ ವಿವಾಹಗಳು ನಡೆದಿಲ್ಲ, ಬಾಲ್ಯವಿವಾಹಗಳನ್ನು ತಡೆಗಟ್ಟಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶತಾಯಗತಾಯ ಪ್ರಯತ್ನ ಮಾಡುತ್ತಿದೆ. ಸ್ಥಳೀಯ ಗ್ರಾಮ ಪಂಚಾಯತಿಗಳ ಮಹಿಳೆ ಸದಸ್ಯರ, ಹೈಸ್ಕೂಲ್ ಮಕ್ಕಳ, ಆಶಾ ಮತ್ತು ಅಂಗನವಾಡಿ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ವಿಶೇಷ ತರಬೇತಿ ನೀಡಲಾಗಿದ್ದು, ವಿಶೇಷ ವಾಟ್ಸ್ ಆಪ್ ಗ್ರೂಪ್ ರಚನೆ ಮಾಡಲಾಗಿದೆ. ಇದನ್ನೂ ಓದಿ: ಮೊದಲ ಬಾರಿಗೆ ಮಗು ಪರಿಚಯಿಸಿದ ಶ್ರೇಯಾ, ಹೆಸರನ್ನೂ ತಿಳಿಸಿದರು

ಈ ಗ್ರೂಪ್ ಸಹಾಯದಿಂದ ಸುಲಭವಾಗಿ ಬಾಲ್ಯ ವಿವಾಹ ನಡೆಯುವ ಮಾಹಿತಿ ದೊರೆಯುತ್ತಿದೆ. ಹೀಗಾಗಿ ವಿವಾಹಗಳು ಆಗುವ ಮೊದಲೇ ಅಧಿಕಾರಿಗಳು ಪಾಲಕರಿಗೆ ತಿಳಿಹೇಳಿ ಮಕ್ಕಳನ್ನು ರಕ್ಷಣೆ ಮಾಡುತ್ತಿದ್ದಾರೆ. ಯಾದಗಿರಿ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‍ಡೌನ್ ಹಿನ್ನೆಲೆ ಅಧಿಕಾರಿಗಳು ಗ್ರಾಮೀಣ ಭಾಗದಲ್ಲಿ ಬರುವುದಿಲ್ಲ ಎಂಬ ಕಾರಣಕ್ಕೆ ಪಾಲಕರು ಧೈರ್ಯವಾಗಿ ಬಾಲ್ಯ ವಿವಾಹಕ್ಕೆ ಮುಂದಾಗುತ್ತಿದ್ದಾರೆ. ಓದುವ ವಯಸ್ಸಿನಲ್ಲಿ ಮಕ್ಕಳ ಭವಿಷ್ಯ ತಮ್ಮ ಕೈಯಾರೆ ಹಾಳು ಮಾಡುತ್ತಾರೆ ಅಂತ ಅಧಿಕಾರಿಗಳು ಕಳವಳ ವ್ಯಕ್ತಪಡಿಸುತ್ತಾರೆ.

ಕೊರೊನಾ ಎರಡನೆಯ ಅಲೆಯಲ್ಲಿ ಗಡಿ ಜಿಲ್ಲೆ ಬೀದರ್‍ನಲ್ಲಿ ಒಟ್ಟು 13 ಬಾಲ್ಯ ವಿವಾಹ ಪ್ರಕರಣಗಳಿಗೆ ಬ್ರೇಕ್ ಹಾಕಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಂದ ನಡೆಯಬೇಕಿದ್ದ 13 ಬಾಲ್ಯ ವಿವಾಹವನ್ನು ತಡೆ ಹಿಡಿಯಲಾಗಿದೆ.

ಔರಾದ್‍ನಲ್ಲಿ 4, ಬಸವಕಲ್ಯಾಣದಲ್ಲಿ 1, ಬೀದರ್‌ನಲ್ಲಿ 1, ಹಾಗೂ ಹುಮ್ನಾಬಾದ್ ನಲ್ಲಿ 7 ಬಾಲ್ಯ ವಿವಾಹ ಪ್ರಕರಣಗಳು ಕಂಡು ಬಂದಿವೆ. ಮಾಹಿತಿ ಪಡೆದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಂರಕ್ಷಣಾ ಘಟಕದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು 13 ಬಾಲ್ಯ ವಿವಾಹವನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 13 ಬಾಲ್ಯ ವಿವಾಹ ಪ್ರಕರಣಗಳು ಜಿಲ್ಲೆಯಲ್ಲಿ ಕಂಡು ಬಂದಿದ್ದು,ನಮ್ಮ ಇಲಾಖೆಯ ಸಂರಕ್ಷಣಾ ಘಟಕ ನಡೆಯಬೇಕಿದ್ದ 13 ಬಾಲ್ಯ ವಿವಾಹವನ್ನು ತಡೆ ಹಿಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ತಿಪ್ಪಣ್ಣ ಪಿ ಸಿರಸಗಿ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *