7 ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳ 705 ಕೋಟಿ ರೂ. ಕ್ರಿಯಾ ಯೋಜನೆಗೆ ಅನುಮೋದನೆ

Public TV
2 Min Read

ಬೆಂಗಳೂರು: ಮೈಸೂರು, ಉಡುಪಿ, ರಾಮನಗರ, ಕೊಡಗು, ಬಳ್ಳಾರಿ, ದಾವಣಗೆರೆ ಮತ್ತು ಬೆಳಗಾವಿ ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳ 2022-23ನೇ ಸಾಲಿನಿಂದ 2024-25ನೇ ಸಾಲಿನ ವರೆಗಿನ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ-4ನೇ ಹಂತದ ಯೋಜನೆಯ ಕ್ರಿಯಾ ಯೋಜನೆಗಳಿಗೆ ಪೌರಾಡಳಿತ, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಎಂ.ಟಿ.ಬಿ.ನಾಗರಾಜ್‌ ಅವರ ಅಧ್ಯಕ್ಷತೆಯ ರಾಜ್ಯಮಟ್ಟದ ಸಮಿತಿ ಅನುಮೋದನೆ ನೀಡಿದೆ.

ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆ-4ನೇ ಹಂತದ 3ನೇ ಸಮಿತಿ ಮತ್ತು ನಗರೋತ್ಥಾನ-3ನೇ ಹಂತದ ಯೋಜನೆಗಳ 18ನೇ ರಾಜ್ಯಮಟ್ಟದ ಸಮಿತಿಯ ಸಭೆ ವಿಧಾನಸೌಧದಲ್ಲಿ ಇಂದು ಸಚಿವ ಎಂ.ಟಿ.ಬಿ. ನಾಗರಾಜ್‌ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಇದರಿಂದಾಗಿ 2022-23ನೇ ಸಾಲಿನಿಂದ 2024-25ನೇ ಸಾಲಿನವರೆಗಿನ 4ನೇ ಹಂತದ ಯೋಜನೆಯ ಈ ಕ್ರಿಯಾ ಯೋಜನೆಗಳಿಂದ ಮೈಸೂರು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 75 ಕೋಟಿ ರೂಪಾಯಿ, ಕೊಡಗು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ 55 ಕೋಟಿ ರೂಪಾಯಿ, ಬಳ್ಳಾರಿ- 80 ಕೋಟಿ ರೂಪಾಯಿ, ರಾಮನಗರ-125 ಕೋಟಿ ರೂಪಾಯಿ, ದಾವಣಗೆರೆ-70 ಕೋಟಿ ರೂಪಾಯಿ, ಬೆಳಗಾವಿ-260 ಕೋಟಿ ರೂಪಾಯಿ ಹಾಗು ಉಡುಪಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 40 ಕೋಟಿ ರೂಪಾಯಿಗಳ ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದೆ.

ರಾಜ್ಯದ 302 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ-4ನೇ ಹಂತದ ಯೋಜನೆಯಡಿ 3885 ಕೋಟಿ ರೂಪಾಯಿ ಮೊತ್ತದ ಕ್ರಿಯಾ ಯೋಜನೆಗೆ ರಾಜ್ಯ ಸಚಿವ ಸಂಪುಟ ಕಳೆದ ಜನವರಿಯಲ್ಲಿ ಅನುಮೋದನೆ ನೀಡಿತ್ತು. ಅಲ್ಲದೆ, 3ನೇ ಹಂತದ ಯೋಜನೆಯಲ್ಲಿ ಉಳಿಕೆಯಾಗಿದ್ದ ಹಣದಲ್ಲಿ ಬೆಳಗಾವಿ, ರಾಮನಗರ, ಬಳ್ಳಾರಿ, ಚಿಕ್ಕಮಗಳೂರು, ಬಾಗಲಕೋಟೆ, ಉತ್ತರ ಕನ್ನಡ ಮತ್ತು ವಿಜಯನಗರ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಲ್ಲಿ ಬದಲಿ ಕಾಮಗಾರಿ ಕೈಗೊಳ್ಳಲು ಸಹ ಸಚಿವ ಎಂ.ಟಿ.ಬಿ. ನಾಗರಾಜು ಅವರ ಅಧ್ಯಕ್ಷತೆಯ ಸಭೆ ಅನುಮೋದನೆ ನೀಡಿತು. ಇದನ್ನೂ ಓದಿ: ಹಿಂದೂಗಳಂತೆ ಮುಸಲ್ಮಾನರೂ ಪೌರಕಾರ್ಮಿಕರಾಗಿ ದುಡಿಯಲಿ: ಸೊಗಡು ಶಿವಣ್ಣ

ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ.ಅಜಯ್ ನಾಗಭೂಷಣ್, ಪೌರಾಡಳಿತ ಇಲಾಖೆ ನಿರ್ದೇಶಕರಾದ ಅರ್ಚನಾ, ಮುಖ್ಯ ಎಂಜಿನಿಯರ್ ಸತ್ಯನಾರಾಯಣ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. ಇದನ್ನೂ ಓದಿ: ಜನಕಲ್ಯಾಣ ಯೋಜನೆ ರೂಪಿಸುವಾಗ ಬಜೆಟ್ ಮಿತಿಯಿರಲಿ: ಸುಪ್ರೀಂಕೋರ್ಟ್

Share This Article
Leave a Comment

Leave a Reply

Your email address will not be published. Required fields are marked *