ಮಾವ ಕೊಟ್ಟ 75 ಲಕ್ಷ ರೂ. ವರದಕ್ಷಿಣೆ ಹಣವನ್ನು ಹಾಸ್ಟೆಲ್‌ ನಿರ್ಮಾಣಕ್ಕೆ ದೇಣಿಗೆ ಕೊಟ್ಟ ಅಳಿಯ

Public TV
1 Min Read

ಜೈಪುರ್: ಮದುವೆಯಲ್ಲಿ ವರದಕ್ಷಿಣೆ ನೀಡಿದ್ದ 75 ಲಕ್ಷ ರೂಪಾಯಿ ಹಣದಲ್ಲಿ ವಧು, ವರ ಬಾಲಕಿಯರ ವಿದ್ಯಾರ್ಥಿನಿಲಯ (ಹಾಸ್ಟೆಲ್) ನಿರ್ಮಾಣ ಮಾಡಲು ಮುಂದಾಗಿರುವುದಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಉದ್ಯಮಿ ಕಿಶೋರ್ ಸಿಂಗ್ ಕನೋದ್ ಇದೇ 21ರಂದು ತಮ್ಮ ಮಗಳಾದ ಅಂಜಲಿ ಕನ್ವಾರ್ ಅವರ ವಿವಾಹವನ್ನು ನೆರವೇರಿಸಿದ್ದರು. ಮದುವೆ ಸಂದರ್ಭದಲ್ಲಿ, ವರ ಪ್ರವೀಣ್ ಸಿಂಗ್‍ಗೆ ವರದಕ್ಷಿಣೆ ನೀಡಲು ಎಂದು ಕಿಶೋರ್ ಅವರು 75 ಲಕ್ಷವನ್ನು ತೆಗೆದಿರಿಸಿದ್ದರು. ಆದರೆ ಮದುವೆಯ ಮುನ್ನಾದಿನ ಅಂಜಲಿ, ವರದಕ್ಷಿಣೆ ನೀಡಲು ತೆಗೆದಿರಿಸಿರುವ ಹಣವನ್ನು ಬಾಲಕಿಯರ ವಿದ್ಯಾರ್ಥಿನಿಲಯ ನಿರ್ಮಾಣಕ್ಕೆ ನೀಡಿ ಎಂದು ತಮ್ಮ ತಂದೆಯನ್ನು ಕೇಳಿಕೊಂಡಿದ್ದಾರೆ. ಇದಕ್ಕೆ ಕಿಶೋರ್ ಸಹ ಸಮ್ಮತಿ ಸೂಚಿಸಿದ್ದಾರೆ. ಇದನ್ನೂ ಓದಿ: ಒಳ್ಳೆ ಬುದ್ಧಿ ಕಲಿಯಿರಿ ಎಂದಿದ್ದಕ್ಕೆ ಸಾಮಾಜಿಕ ಕಾರ್ಯಕರ್ತನ ಕೊಲೆಗೈದ ಬಾಲಕರು!

MONEY

ಮದುವೆಯ ದಿನ ಮಂಟಪದಲ್ಲಿಯೇ ಈ ಬಗ್ಗೆ ಕಿಶೋರ್ ಘೋಷಣೆ ಮಾಡಿದ್ದಾರೆ. ತಮ್ಮ ಮಗಳಿಗೆ ಖಾಲಿ ಚೆಕ್ ನೀಡಿ, ಎಷ್ಟು ದೇಣಿಗೆ ನೀಡಬೇಕೊ ಅದನ್ನು ಚೆಕ್‍ನಲ್ಲಿ ನಮೂದಿಸು ಎಂದು ಹೇಳಿದ್ದಾರೆ. ಅಂಜಲಿ ಆ ಚೆಕ್‍ನಲ್ಲಿ 75 ಲಕ್ಷ ನಮೂದಿಸಿದ್ದಾರೆ. ಆ ಚೆಕ್ ಅನ್ನು ತಾರಾತರ ಮಠದ ಮುಖ್ಯಸ್ಥರಿಗೆ ಮಂಟಪದಲ್ಲಿಯೇ ಹಸ್ತಾಂತರಿಸಲಾಗಿದೆ. ಇದನ್ನೂ ಓದಿ: IND vs NZ ಟೆಸ್ಟ್ ಪಂದ್ಯದಲ್ಲಿ ಸುದ್ದಿಯಾದ ಪಾನ್ ಭಾಯ್ – ವೀಡಿಯೋ ವೈರಲ್

BRIBE

ನಾವು ನಿರ್ಮಿಸುತ್ತಿರುವ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಕಿಶೋರ್ ಅವರು ಈ ಮೊದಲೇ 1 ಕೋಟಿ ದೇಣಿಗೆ ನೀಡಿದ್ದರು. ಕಾಮಗಾರಿ ಪೂರ್ಣಗೊಳಿಸಲು ಇನ್ನೂ 50,75 ಲಕ್ಷದ ಅಗತ್ಯವಿತ್ತು. ಕಿಶೋರ್ ಅವರು ಈಗ ಅದನ್ನೂ ಒದಗಿಸಿದ್ದಾರೆ ಎಂದು ತಾರಾತರ ಮಠದವರು ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *