75 ವರ್ಷದ ವೃದ್ಧೆ ಮೇಲೆ ಭಿಕ್ಷಾಟನೆ ಮಾಡುತ್ತಿದ್ದ ಯುವಕನಿಂದ ಅತ್ಯಾಚಾರ

By
1 Min Read

ಕಲಬುರಗಿ: 75 ವರ್ಷದ ನಿಸ್ಸಹಾಯಕ ವೃದ್ಧೆಯ ಮೇಲೆ ಭಿಕ್ಷಾಟನೆ ಮಾಡುತ್ತಾ ಊರೂರು ಸುತ್ತುತ್ತಿದ್ದ ಯುವಕ ಅತ್ಯಾಚಾರವೆಸಗಿರುವ ಘಟನೆ ಕಲಬುರಗಿ (Kalaburagi) ಜಿಲ್ಲೆ ಚಿಂಚೋಳಿ (Chincholi) ತಾಲೂಕಿನ ಚಂದ್ರಪಳ್ಳಿ ಗ್ರಾಮದಲ್ಲಿ ನಡೆದಿದೆ.

ಪಕ್ಕದ ಐನೊಳ್ಳಿ ಗ್ರಾಮದ ಫಕೀರ ತಯ್ಯಬ್ ಎಂಬ ಯುವಕ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯೊಳಗೆ ನುಗ್ಗಿ ವೃದ್ಧೆಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ.  ಇದನ್ನೂ ಓದಿ: Naxal Encounter| 3 ರಾಜ್ಯಕ್ಕೆ ಬೇಕಾಗಿದ್ದ ಮೋಸ್ಟ್‌ ವಾಟೆಂಡ್‌ ನಕ್ಸಲ್‌ ನಾಯಕ ವಿಕ್ರಂ ಗೌಡ ಯಾರು?

ತಯ್ಯಬ್ ಭಿಕ್ಷಾಟನೆ ಮಾಡುತ್ತಾ ಊರೂರು ಸುತ್ತುತ್ತಿದ್ದ. ಸದ್ಯ ಪರಾರಿಯಾಗಿರುವ ತಯ್ಯಬ್‌ನನ್ನು ಪತ್ತೆಹಚ್ಚುವ ಸಲುವಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತೀವ್ರ ಅಸ್ವಸ್ಥಗೊಂಡ ವೃದ್ಧೆಯನ್ನು ಬೀದರ್‌ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಉಡುಪಿಯ ಕಬ್ಬಿನಾಲೆಯಲ್ಲಿ ಎನ್‌ಕೌಂಟರ್‌ – ನಕ್ಸಲ್‌ ನಾಯಕ ವಿಕ್ರಂ ಗೌಡ ಹತ್ಯೆ

Share This Article