ಪಬ್ಲಿಕ್ ಟಿವಿ ಕಚೇರಿಯಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

Public TV
1 Min Read

ಬೆಂಗಳೂರು: ದೇಶದೆಲ್ಲೆಡೆ ಇಂದು 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಅಂತೆಯೇ ಇಂದು ಪಬ್ಲಿಕ್ ಟಿವಿ ಕಚೇರಿಯಲ್ಲಿಯೂ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು.

ಕಚೇರಿಯ ಮುಂಭಾಗದಲ್ಲಿ ಹೌಸ್ ಕೀಪಿಂಗ್ ವಿಭಾಗದ ಮುಖ್ಯಸ್ಥ ಕುಮಾರ್ ಹಾಗೂ ಲಕ್ಷ್ಮಮ್ಮ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಮುಖ್ಯಸ್ಥ ಹೆಚ್. ಆರ್ ರಂಗನಾಥ್, ಸಿಇಓ ಅರುಣ್ ಕುಮಾರ್, ಸಿಓಓ ಹರೀಶ್ ಕುಮಾರ್ ಹಾಗೂ ಪಬ್ಲಿಕ್ ಟಿವಿಯ ಸಿಬ್ಬಂದಿ ಉಪಸ್ಥಿತರಿದ್ದರು.

ಇದೇ ವೇಳೆ ಎಲ್ಲರಿಗೂ ಸ್ವಾತಂತ್ರ್ಯದಿನದ ಶುಭಾಶಯಗಳನ್ನು ಸಂಸ್ಥೆಯ ಮುಖ್ಯಸ್ಥರು ತಿಳಿಸಿದರು. ಇದನ್ನೂ ಓದಿ: ಕೇಂದ್ರ, ರಾಜ್ಯ ಸರ್ಕಾರ ಯಾವುದೇ ಆಡಳಿತವಾಗಲಿ ಕಾಲಕ್ಕೆ ತಕ್ಕಂತೆ ಕೆಲಸ ಮಾಡಬೇಕು: ಮೋದಿ

Live Tv

Share This Article
Leave a Comment

Leave a Reply

Your email address will not be published. Required fields are marked *