ಯೆಮೆನ್‌ನಲ್ಲಿ ವಲಸಿಗರಿದ್ದ ಬೋಟ್ ಮುಳುಗಡೆ – 76 ಮಂದಿ ಸಾವು

Public TV
1 Min Read

ಸನಾ: ಇಥಿಯೋಪಿಯನ್ ವಲಸಿಗರಿದ್ದ (Ethiopian Migrants) ಬೋಟ್ ಮುಳುಗಡೆಯಾದ (Boat Capsize) ಪರಿಣಾಮ 76 ಮಂದಿ ವಲಸಿಗರು ಸಾವನ್ನಪ್ಪಿದ್ದು, ಅನೇಕರು ನಾಪತ್ತೆಯಾಗಿರುವ ಘಟನೆ ಯೆಮೆನ್ (Yemen) ಕರಾವಳಿಯಲ್ಲಿ ನಡೆದಿದೆ.

ಯೆಮೆನ್‌ನ ದಕ್ಷಿಣ ಅಬ್ಯಾನ್ (Abyan) ಪ್ರಾಂತ್ಯದ ಕರಾವಳಿಯಲ್ಲಿ ದೋಣಿ ಮುಳುಗಡೆಯಾಗಿದ್ದು, 32 ಮಂದಿಯನ್ನು ರಕ್ಷಿಸಲಾಗಿದೆ. ಘಟನೆಯಲ್ಲಿ 76 ಮಂದಿ ವಲಸಿಗರ ಮೃತದೇಹ ಪತ್ತೆಯಾಗಿದೆ ಎಂದು ಯೆಮೆನ್ ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ. ಒಟ್ಟು 157 ಜನರು ಹಡಗಿನಲ್ಲಿದ್ದರು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಶಿಬು ಸೊರೇನ್ ಇಡೀ ಜೀವನವನ್ನು ಬುಡಕಟ್ಟು ಸಮುದಾಯದ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದರು: ಮೋದಿ ಸಂತಾಪ

ಕಡುಬಡತನದಿಂದ ಆಫ್ರಿಕಾದಿಂದ ನೂರಾರು ವಲಸಿಗರು ಗಲ್ಫ್ ಅರಬ್ ರಾಷ್ಟ್ರಕ್ಕೆ ತೆರಳುತ್ತಿದ್ದರು. ಯೆಮೆನ್‌ಗೆ ಅನಧಿಕೃತ ವಲಸಿಗರ ಹರಿವು ಹೆಚ್ಚಾಗುತ್ತಿದೆ ಎಂದು ವಿಶ್ವಸಂಸ್ಥೆಯ ಅಂತರರಾಷ್ಟ್ರೀಯ ವಲಸೆ ಸಂಘಟನೆ ತಿಳಿಸಿದೆ. ಕಳೆದ ವರ್ಷ ಯೆಮೆನ್‌ಗೆ 60 ಸಾವಿರಕ್ಕೂ ಹೆಚ್ಚು ಮಂದಿ ವಲಸೆ ಹೋಗಿದ್ದರು ಎಂದು ಐಓಎಂ ಮಾಹಿತಿ ನೀಡಿದೆ. ಇದನ್ನೂ ಓದಿ: KRS ಡ್ಯಾಂ ಮೈಸೂರು ರಾಜಮನೆತನದ ತ್ಯಾಗದಿಂದ ನಿರ್ಮಾಣವಾಗಿದೆ – ಮಂತ್ರಾಲಯ ಶ್ರೀ

Share This Article