ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 77 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆ. 1 ಮರಣ ಪ್ರಕರಣ ವರದಿಯಾಗಿದೆ.
ಬೆಂಗಳೂರು ನಗರದಲ್ಲಿ 73 ಪಾಸಿಟಿವ್ ಕೇಸ್ ಮತ್ತು ಶೂನ್ಯ ಮರಣ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ದಾಖಲಾದ ಏಕೈಕ ಮರಣ ಪ್ರಕರಣ ಗದಗದಲ್ಲಿ ವರದಿಯಾಗಿದೆ. ಇಂದು 1.29% ಮರಣ ಪ್ರಮಾಣ ಸೇರಿದಂತೆ ರಾಜ್ಯದಲ್ಲಿ ಈವರೆಗೆ ಒಟ್ಟು 40,057 ಮರಣ ಪ್ರಕರಣ ದಾಖಲಾಗಿದೆ. ರಾಜ್ಯದ ಪಾಸಿಟಿವಿಟಿ ರೇಟ್ 0.64% ಮತ್ತು ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,459ಕ್ಕೆ ಇಳಿಕೆ ಕಂಡಿದೆ. ಒಟ್ಟು 44 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ಏಪ್ರಿಲ್ 10 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರೂ ಖಾಸಗಿ ಆಸ್ಪತ್ರೆಗಳಲ್ಲಿ ಬೂಸ್ಟರ್ ಡೋಸ್ ಪಡೆಯಬಹುದು – ಆರೋಗ್ಯ ಇಲಾಖೆ
ಈವರೆಗೆ ರಾಜ್ಯದಲ್ಲಿ ಒಟ್ಟು 39,45,900 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,04,342 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 66,096 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 11,859 ಸ್ಯಾಂಪಲ್ (ಆರ್‌ಟಿಪಿಸಿಆರ್ 8,876 + 2,983 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಕರ್ನಾಟಕ ಪ್ರಗತಿ ನಿಲ್ಲಿಸಲು ಸಾಧ್ಯವಿಲ್ಲ, ತಮಿಳುನಾಡು, ತೆಲಂಗಾಣ ರಾಜ್ಯಗಳಿಗೆ ಹತಾಶೆ ಕಾಡುತ್ತಿದೆ: ಬೊಮ್ಮಾಯಿ
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 73, ಚಿತ್ರದುರ್ಗ, ದಕ್ಷಿಣಕನ್ನಡ 2, ಗದಗ ಮತ್ತು ಮೈಸೂರಿನಲ್ಲಿ ತಲಾ ಒಂದೊಂದು ಪಾಸಿಟಿವ್ ಪ್ರಕರಣ ದಾಖಲಾಗಿದೆ.