ಕಲುಷಿತ ನೀರು ಕುಡಿದು 7ನೇ ಸಾವು – ಅಂಕಿ ಅಂಶದಲ್ಲಿ ಅಧಿಕಾರಿಗಳ ಕಳ್ಳಾಟ

Public TV
1 Min Read

ರಾಯಚೂರು: ನಗರಸಭೆ ಸರಬರಾಜು ಮಾಡಿದ ಕಲುಷಿತ ನೀರು ಕುಡಿದು ಮತ್ತೊಂದು ಸಾವಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ನಗರದ ವಾರ್ಡ್ ಸಂಖ್ಯೆ 14ರ ಮಚ್ಚಿಬಜಾರ್ ನಿವಾಸಿ ಶಮೀಮ್ ಬೇಗಂ(48) ಸಾವಿನ ಮೂಲಕ ಮೃತರ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ. ಮೇ 28ಕ್ಕೆ ವಾಂತಿ ಭೇದಿ, ಕಿಡ್ನಿ ಸಮಸ್ಯೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಾದ ಮಹಿಳೆ ಮೇ 29 ರಂದು ಸಾವನ್ನಪ್ಪಿದ್ದರು. ಆದರೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: ದಲಿತ ಮುಖಂಡನ ಕೊಲೆ ಪ್ರಕರಣ – ಐವರು ಶಂಕಿತರು ವಶಕ್ಕೆ

ಸಾವಿನ ಕಾರಣ ತಡವಾಗಿ ಬೆಳಕಿಗೆ ಬಂದಿದ್ದು, ಜಿಲ್ಲಾಡಳಿತ ಹಾಗೂ ನಗರಸಭೆ ಮೃತಪಟ್ಟವರ ಸಂಖ್ಯೆಯನ್ನು ಮುಚ್ಚಿಡುತ್ತಿರುವುದು ಬಯಲಾಗಿದೆ. ಇದುವರೆಗೂ ಮೃತಪಟ್ಟವರು ಹಾಗೂ ಆಸ್ಪತ್ರೆಗೆ ದಾಖಲಾದವರ ಸಂಖ್ಯೆಯನ್ನು ಗುಪ್ತವಾಗಿಯೇ ಇಟ್ಟಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ನಗರಸಭೆ ಹಾಗೂ ಜಿಲ್ಲಾಡಳಿತ ಖಾಸಗಿ ಆಸ್ಪತ್ರೆಗಳಲ್ಲಿ ಸಾವನ್ನಪ್ಪಿದವರ ಲೆಕ್ಕವೇ ಇಡುತ್ತಿಲ್ಲ. ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾದವರ ಲೆಕ್ಕವೂ ಸಿಗುತ್ತಿಲ್ಲ. ಮಾಧ್ಯಮಗಳಲ್ಲಿ ಬರುವ ಮಾಹಿತಿಯೇ ಅಂತಿಮವಾಗಿದೆ. ಹೀಗಾಗಿ ಸಾರ್ವಜನಿಕರು ಮೃತಪಟ್ಟವರ ಹಾಗೂ ಆಸ್ಪತ್ರೆಗೆ ದಾಖಲಾದವರ ಸಂಖ್ಯೆಯನ್ನು ಬಹಿರಂಪಡಿಸುವಂತೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಸೇಫ್ಟಿ ಬೆಲ್ಟ್ ಇಲ್ಲದೆ ಕೆಲಸ ಮಾಡ್ತಿದ್ದ ಕಾರ್ಮಿಕ 50 ಅಡಿ ಎತ್ತರದಿಂದ ಬಿದ್ದು ಸಾವು

ಮೃತರ ಕುಟುಂಬಗಳಿಗೆ ಪರಿಹಾರ ನೀಡಬೇಕು, ಬಾಧಿತರಿಗೆ ಚಿಕಿತ್ಸಾ ವೆಚ್ಚ ಭರಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Live Tv

Share This Article
Leave a Comment

Leave a Reply

Your email address will not be published. Required fields are marked *