Delhi | ಪಾಲಂನ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ – 8 ಮಂದಿ ಸಾವು

1 Min Read

– ಸ್ಥಳದಲ್ಲಿ 30 ಅಗ್ನಿಶಾಮಕದಿಂದ ರಕ್ಷಣಾ ಕಾರ್ಯಾಚರಣೆ

ನವದೆಹಲಿ: ವಸತಿ ಕಟ್ಟಡವೊಂದರಲ್ಲಿ (Residential Building) ಬುಧವಾರ ಬೆಳಗ್ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, 8 ಮಂದಿ ಸಾವನ್ನಪ್ಪಿರುವ ಘಟನೆ ನೈಋತ್ಯ ದೆಹಲಿಯ (Delhi) ಪಾಲಂ (Palam) ಪ್ರದೇಶದಲ್ಲಿ ನಡೆದಿದೆ.

ಬುಧವಾರ ಮುಂಜಾನೆ 7 ಗಂಟೆಯ ಸುಮಾರಿಗೆ ಅಗ್ನಿ ಅವಘಡದ ಬಗ್ಗೆ ಕರೆ ಬಂದಿದೆ. ಘಟನಾ ಸ್ಥಳಕ್ಕೆ 30 ಅಗ್ನಿಶಾಮಕ ವಾಹನಗಳು ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಕಟ್ಟಡದ ಒಳಗೆ ಇನ್ನೂ ಹಲವರು ಸಿಲುಕಿರುವ ಶಂಕೆಯಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಉ.ಕೊರಿಯಾ ಚುನಾವಣೆ: 99.93% ಮತ ಪಡೆದು ಮತ್ತೆ ಭರ್ಜರಿ ಗೆಲುವು ಸಾಧಿಸಿದ ಕಿಮ್‌ ಜಾಂಗ್‌ ಉನ್‌

ರಕ್ಷಣಾ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಸಿಬ್ಬಂದಿಗೆ ಸಹಾಯ ಮಾಡಲು ಪೊಲೀಸರು ಕೂಡ ಕೈಜೋಡಿಸಿದ್ದಾರೆ. ಅಗ್ನಿ ಅವಘಡಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಇಂದಿನಿಂದ SSLC ಪರೀಕ್ಷೆ 1 ಪ್ರಾರಂಭ – ವಿದ್ಯಾರ್ಥಿಗಳಿಗೆ ಶುಭಕೋರಿದ ಸಚಿವ ಮಧುಬಂಗಾರಪ್ಪ

Share This Article