ಉಕ್ರೇನ್‌ನ ಖಾರ್ಕಿವ್ ಮೇಲೆ ರಷ್ಯಾ ಮಿಸೈಲ್ ದಾಳಿ – ಇಬ್ಬರು ಮಕ್ಕಳು ಸೇರಿ 8 ಮಂದಿ ಸಾವು

1 Min Read

ಕೀವ್: ಉಕ್ರೇನ್‌ನ (Ukraine) ಎರಡನೇ ಅತಿದೊಡ್ಡ ನಗರವಾದ ಖಾರ್ಕಿವ್‌ನಲ್ಲಿರುವ (Kharkiv) ಐದು ಅಂತಸ್ತಿನ ವಸತಿ ಕಟ್ಟಡಕ್ಕೆ ರಷ್ಯಾದ (Russia) ಕ್ಷಿಪಣಿ ಅಪ್ಪಳಿಸಿದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ.

- Advertisement -

ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಈ ದಾಳಿಯನ್ನು ಖಂಡಿಸಿದ್ದಾರೆ. ರಷ್ಯಾ 29 ಕ್ಷಿಪಣಿಗಳು ಮತ್ತು 480 ಡ್ರೋನ್‌ಗಳೊಂದಿಗೆ ರಾತ್ರೋರಾತ್ರಿ ಉಕ್ರೇನ್ ಮೇಲೆ ದಾಳಿ ಮಾಡಿದೆ. ಕೀವ್ ಮತ್ತು ಇತರ ಮಧ್ಯ ಪ್ರದೇಶಗಳಲ್ಲಿನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡಿದೆ. ದೇಶಾದ್ಯಂತ ಏಳು ಸ್ಥಳಗಳಲ್ಲಿ ಹಾನಿಯಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ನೆರೆ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸುತ್ತೇನೆ: ಇರಾನ್‌ ಅಧ್ಯಕ್ಷ ಮಸೌದ್‌

- Advertisement -

ಏರ್‌ ಡಿಫೆನ್ಸ್‌ ಸಿಸ್ಟಮ್‌ 19 ಕ್ಷಿಪಣಿಗಳು ಮತ್ತು 453 ಡ್ರೋನ್‌ಗಳನ್ನು ಹೊಡೆದುರುಳಿಸಿದ್ದು, 22 ಸ್ಥಳಗಳಲ್ಲಿ ಒಂಬತ್ತು ಕ್ಷಿಪಣಿಗಳು ಮತ್ತು 26 ಸ್ಟ್ರೈಕ್ ಡ್ರೋನ್‌ಗಳಿಂದ ದಾಳಿಗಳು ದಾಖಲಾಗಿವೆ.

- Advertisement -

- Advertisement -

ಪ್ರಾಥಮಿಕ ಶಾಲಾ ಶಿಕ್ಷಕಿ ಮತ್ತು ಅವರ ಮಗ, ಎರಡನೇ ತರಗತಿಯ ವಿದ್ಯಾರ್ಥಿನಿ ಅವರ ಮನೆಯಲ್ಲಿ ಸಾವನ್ನಪ್ಪಿದ್ದಾರೆ. ಎಂಟನೇ ತರಗತಿಯ ವಿದ್ಯಾರ್ಥಿನಿ ಕೂಡ ತನ್ನ ತಾಯಿಯೊಂದಿಗೆ ಸಾವನ್ನಪ್ಪಿದ್ದಾರೆ ಎಂದು ನಗರದ ಮೇಯರ್ ಇಹೋರ್ ಟೆರೆಖೋವ್ ತಿಳಿಸಿದ್ದಾರೆ. ಇದನ್ನೂ ಓದಿ: ದುಬೈ ವಿಮಾನ ನಿಲ್ದಾಣದ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

ಇಜ್ಡೆಲಿಯೆ-30 ಎಂಬ ಹೊಸ ರಷ್ಯಾದ ಕ್ರೂಸ್ ಕ್ಷಿಪಣಿ ಕಟ್ಟಡವನ್ನು ಹೊಡೆದಿದೆ ಎಂದು ಪ್ರಾದೇಶಿಕ ಪ್ರಾಸಿಕ್ಯೂಟರ್ ಕಚೇರಿ ತಿಳಿಸಿದೆ. ರಷ್ಯಾದ ರಕ್ಷಣಾ ಸಚಿವಾಲಯವು, ದಾಳಿಯು ಉಕ್ರೇನಿಯನ್ ಮಿಲಿಟರಿ ನೆಲೆಗಳು, ಇಂಧನ ಸೌಲಭ್ಯಗಳು ಮತ್ತು ವಾಯುನೆಲೆಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಹೇಳಿದೆ.

Share This Article