ಅಪ್ರಾಪ್ತ ಅಣ್ಣನಿಂದ್ಲೇ ತಂಗಿಯ ಮೇಲೆ ಅತ್ಯಾಚಾರ!

Public TV
1 Min Read

ನವದೆಹಲಿ: 8 ವರ್ಷದ ಬಾಲಕಿ ಮೇಲೆ ಆಕೆಯ ಅಣ್ಣನೇ ಅತ್ಯಾಚಾರವೆಸಗಿದ ಘಟನೆ ದೆಹಲಿಯ ಆದರ್ಶ್ ನಗರದಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ಘಟನೆ ಬುಧವಾರ ಬೆಳಕಿಗೆ ಬಂದಿದ್ದು, ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆಕೆಯ ಅಣ್ಣ ಅಪ್ರಾಪ್ತನಾಗಿದ್ದಾನೆ.

ಸೋಮವಾರ ಬಾಲಕಿಯ ಗುಪ್ತಾಂಗದಲ್ಲಿ ರಕ್ತಸ್ರಾವವಾಗುತ್ತಿದ್ದುದರಿಂದ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿರುವ ಮಾಹಿತಿಯೊಂದು ಪೊಲೀಸರಿಗೆ ಬಂದಿದೆ ಅಂತ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಲಕ ತನ್ನ ಸಹೋದರಿಯ ಮೇಲೆ ಬಲವಂತವಾಗಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಬಾಲಕಿ ಕೌನ್ಸಿಲರ್ ಬಳಿ ಹೇಳಿದ್ದಾಳೆಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಬಾಲಕಿಯ ಪೋಷಕರು ಮನೆಗೆ ಹಿಂದುರುಗಿದಾಗ ಬಾಲಕಿಯ ಗುಪ್ತಾಂಗದಲ್ಲಿ ರಕ್ತಸ್ರಾವವಾಗುತ್ತಿರುವುದನ್ನು ಕಂಡು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರು. ಸದ್ಯ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ಹೇಳಿದ್ದಾರೆ.

ಬಾಲಕಿ ದೇಹದ ಮೇಲೆ ಹಲವು ಗಾಯಗಳಾಗಿದ್ದು, ಶಸ್ತ್ರ ಚಿಕಿತ್ಸೆ ಪಡೆಯುತ್ತಿದ್ದಾಳೆ. ಆದರೆ ಬಾಲಕಿ ಸ್ಥಿತಿ ಚಿಂತಾಜನಕವಾಗಿದೆ ಎಂದು ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಾಲಿವಾಲ್ ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಹೇಳಿದ್ದಾರೆ.

ದೇಶದಲ್ಲಿ ಮಹಿಳೆ ಹಾಗೂ ಮಕ್ಕಳ ಮೇಲೆ ಸಾಕಷ್ಟು ಅಪರಾಧಗಳು ನಡೆಯುತ್ತಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸರ್ಕಾರ ಕ್ರಮಕೈಗೊಳ್ಳಬೇಕು. ಸದ್ಯ ಬಾಲಕಿ ಚೇತರಿಕೆ ಕಾಣುವರೆಗೂ ನಮ್ಮ ಆಯೋಗ ಎಲ್ಲ ಸಹಾಯ ಮಾಡುತ್ತದೆ ಎಂದು ಸ್ವಾತಿ ಮಲಿವಾಲ್ ತಿಳಿಸಿದ್ದಾರೆ.

ದೆಹಲಿ ಪೊಲೀಸರ ಡೇಟಾ ಪ್ರಕಾರ, ರಾಷ್ಟ್ರ ರಾಜಧಾನಿಯಲ್ಲಿ ಪ್ರತಿದಿನ 2ಕ್ಕೂ ಹೆಚ್ಚು ಚೈಲ್ಡ್ ರೇಪ್ ಪ್ರಕರಣಗಳು ದಾಖಲಾಗುತ್ತಿದೆ. ಏಪ್ರಿಲ್ 30ರ ವರೆಗೂ 282 ಮಕ್ಕಳ ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿದೆ. ಕಳೆದ ವರ್ಷ ಸುಮಾರು 278 ಮಕ್ಕಳ ಅತ್ಯಾಚಾರ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *