ರೈಲು ಪ್ರಯಾಣದ ವೇಳೆ 8 ಯುವಕರಿಗೆ ಮತ್ತು ಬರೋ ಚಾಕ್ಲೇಟ್ ನೀಡಿ ದರೋಡೆ

Public TV
1 Min Read

ಬೆಳಗಾವಿ: ರೈಲು (Train) ಪ್ರಯಾಣದ ವೇಳೆ ವಿಷಾಹಾರ ಸೇವಿಸಿ 8 ಜನ ಯುವಕರು ಅಸ್ವಸ್ಥರಾಗಿದ್ದರು. ಆದರೆ ಈ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. 8 ಜನ ಯುವಕರಿಗೆ ಮತ್ತು ಬರುವ ಚಾಕ್ಲೇಟ್, ಚಿಪ್ಸ್ ನೀಡಿ ಮೊಬೈಲ್ ಹಣ ದರೋಡೆ (Robbery) ಮಾಡಿರುವ ಆರೋಪ ಕೇಳಿಬಂದಿದೆ.

ಗೋವಾದಿಂದ ಬರುತ್ತಿದ್ದ ನಿಜಾಮುದ್ದೀನ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದ 8 ಯುವಕರು ಏಕಾಏಕಿ ಅಸ್ವಸ್ಥರಾಗಿದ್ದರು. ಈ ವೇಳೆ ಅವರನ್ನು ಬೆಳಗಾವಿ ರೈಲ್ವೆ ಪೊಲೀಸರು ಬೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದು ಸದ್ಯ ಎಲ್ಲರೂ ಆರೋಗ್ಯವಾಗಿದ್ದಾರೆ. ಆದರೆ ಗೋವಾ-ಕರ್ನಾಟಕ ಮಧ್ಯೆ ಪ್ರಯಾಣಿಕರನ್ನು ಟಾರ್ಗೆಟ್ ಮಾಡಿ ದರೋಡೆ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಪ್ರಕರಣದ ಹಿನ್ನೆಲೆ ನೋಡುವುದಾದರೆ ಮತ್ತು ಬರುವ ಚಾಕ್ಲೇಟ್, ಚಿಪ್ಸ್ ನೀಡಿ ಚಿನ್ನಾಭರಣ, ಹಣ, ಮೊಬೈಲ್ ದೋಚುವ ಗ್ಯಾಂಗ್‌ನಿಂದ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಕೇರಳದಲ್ಲಿ ನಿಫಾ ವೈರಸ್ – ಎಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಅಧಿಕಾರಿಗಳಿಗೆ ಗುಂಡೂರಾವ್ ಸೂಚನೆ

ಇದೇ ಗ್ಯಾಂಗ್‌ನ ಖೆಡ್ಡಾಗೆ 8 ಜನ ಪ್ರಯಾಣಿಕರು ಬಿದ್ದಿರುವ ಶಂಕೆ ವ್ಯಕ್ತವಾಗಿದ್ದು 48 ಗಂಟೆ ಬಳಿಕ ಪೂರ್ಣ ಪ್ರಮಾಣದಲ್ಲಿ ಯುವಕರು ಸುಧಾರಿಸಿಕೊಳ್ಳುತ್ತಿದ್ದಾರೆ. ಐಸಿಯುನಲ್ಲಿ ಓರ್ವ, ಜನರಲ್ ವಾರ್ಡ್ನಲ್ಲಿ 7 ಯುವಕರಿಗೆ ಚಿಕಿತ್ಸೆ ನೀಡಲಾಗಿದೆ. ಈ ಯುವಕರಿಗೆ ಖದೀಮರು ತಿನ್ನಲು ಚಾಕ್ಲೇಟ್ ಮತ್ತು ಕುರುಕುರೆ ನೀಡಿದ್ದಾರೆ. ಯುವಕರಿಗೆ ಚಾಕ್ಲೇಟ್, ಕುರುಕುರೆ ತಿಂದಿರೋದಷ್ಟೇ ನೆನಪಿದೆ. ಬಳಿಕ ಅವರ ಮೊಬೈಲ್‌ಗಳು ಹಾಗೂ ಒಟ್ಟು 36 ಸಾವಿರ ರೂ. ನಗದು ದೋಚಿಕೊಂಡು ಪರಾರಿ ಆಗಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಸುಧಾ ಮೂರ್ತಿ ಜೊತೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ತಂದೆ, ತಾಯಿ ಮಂತ್ರಾಲಯಕ್ಕೆ ಭೇಟಿ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್