ಬಿಜೆಪಿಯಿಂದಲೇ ಕೇಂದ್ರೀಯ ತನಿಖಾ ಸಂಸ್ಥೆಗಳ ದುರುಪಯೋಗ – 9 ಪ್ರತಿಪಕ್ಷ ನಾಯಕರಿಂದ ಮೋದಿಗೆ ಪತ್ರ

Public TV
1 Min Read

ನವದೆಹಲಿ: ಬಿಜೆಪಿಯು (BJP) ತಮ್ಮ ತಮ್ಮ ನಾಯಕರನ್ನ ಬಂಧಿಸಲು ಕೇಂದ್ರೀಯ ತನಿಖಾ ದಳ (CBI), ಜಾರಿ ನಿರ್ದೇಶನಾಲಯ (ED) ಅಂತಹ ಕೇಂದ್ರೀಯ ತನಿಖಾ ಸಂಸ್ಥೆಗಳನ್ನ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ 9 ಪ್ರತಿಪಕ್ಷ ನಾಯಕರು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಪತ್ರ ಬರೆದಿದ್ದಾರೆ.

ಭಾರತ್ ರಾಷ್ಟ್ರ ಸಮಿತಿಯ (BRS) ಮುಖ್ಯಸ್ಥ ಚಂದ್ರಶೇಖರ್ ರಾವ್, ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ (JKNC) ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ, ಟಿಎಂಸಿ ಮುಖ್ಯಸ್ಥೆ ಹಾಗೂ ಸಿಎಂ ಮಮತಾ ಬ್ಯಾನರ್ಜಿ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ಮುಖ್ಯಸ್ಥ ಶರದ್ ಪವಾರ್ ಹಾಗೂ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಪತ್ರದ ಮೂಲಕ ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಮ್ಮ ಕಲ್ಲಿದ್ದಲಿನಿಂದ ಭಾರತದ ಲಕ್ಷಾಂತರ ಮಂದಿಗೆ ವಿದ್ಯುತ್‌: ಅದಾನಿ ಪರ ಆಸ್ಟ್ರೇಲಿಯಾದ ಮಾಜಿ ಪ್ರಧಾನಿ ಬ್ಯಾಟಿಂಗ್‌

2014ರಿಂದಲೂ ಬಿಜೆಪಿ ಆಡಳಿತದಲ್ಲಿ ತನಿಖಾ ಸಂಸ್ಥೆಗಳಿಂದ ಪ್ರಕರಣ ದಾಖಲಿಸಿದ, ಬಂಧಿಸಿದ, ದಾಳಿ ಮಾಡಿದ ಅಥವಾ ವಿಚಾರಣೆಗೆ ಒಳಗಾದ ಹೆಚ್ಚಿನ ರಾಜಕಾರಣಿಗಳು ವಿರೋಧ ಪಕ್ಷಕ್ಕೆ ಸೇರಿದವರಾಗಿದ್ದಾರೆ. ಆದ್ರೆ ಬಿಜೆಪಿ ಸೇರ್ಪಡೆಗೊಂಡ ವಿರೋಧ ಪಕ್ಷದ ರಾಜಕಾರಣಿಗಳ ವಿರುದ್ಧದ ಮಾತ್ರ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಮತ್ತೊಂದು ಕೇಸ್ – ಕುಡಿದ ಅಮಲಿನಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ

ಉದಾಹರಣೆಗೆ, ಕಾಂಗ್ರೆಸ್ ಮಾಜಿ ಸದಸ್ಯ ಮತ್ತು ಪ್ರಸ್ತುತ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರನ್ನ ಚಿಟ್‌ಫಂಡ್ ಹಗರಣದಲ್ಲಿ 2014, 2015 ರಲ್ಲಿ ಸಿಬಿಐ ಮತ್ತು ಇ.ಡಿ ತನಿಖೆ ನಡೆಸಿತ್ತು. ಆದ್ರೆ ಅವರು ಬಿಜೆಪಿ ಸೇರಿದ ನಂತರ ಪ್ರಕರಣ ಪ್ರಗತಿ ಕಾಣಲಿಲ್ಲ. ಅದೇ ರೀತಿ, ಟಿಎಂಸಿ ಮಾಜಿ ನಾಯಕರಾದ ಸುವೇಂದು ಅಧಿಕಾರಿ, ಮುಕುಲ್ ರಾಯ್ ಅವರ ವಿರುದ್ಧ ಇ.ಡಿ ಮತ್ತು ಸಿಬಿಐ ತನಿಖಾ ಸಂಸ್ಥೆಗಳನ್ನು ಚೂ ಬಿಡಲಾಗಿತ್ತು. ಆದ್ರೆ ಅವರು ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ಸೇರಿದ ನಂತರ ಪ್ರಕರಣಗಳು ಮುಚ್ಚಿಹೋದವು ಇನ್ನೂ ಅನೇಕ ಉದಾಹರಣೆಗಳಿವೆ ಎಂದು ಪ್ರತಿಪಕ್ಷ ನಾಯಕರು ಕಳವಳ ವ್ಯಕ್ತಪಡಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *