ಹೈದರಾಬಾದ್: 9ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಹಿಂದಿ ಶಿಕ್ಷಕನೊಬ್ಬ ಬ್ಲೇಡ್‍ನಿಂದ ಕ್ರೂರವಾಗಿ ಹಲ್ಲೆ ಮಾಡಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ.
ಕರ್ನೂಲ್ ಜಿಲ್ಲೆಯ ಬಂಗರುಪೇಟಾ ಪ್ರದೇಶದಲ್ಲಿರುವ ರಾಕ್ವೆಲ್ ಹೈಸ್ಕೂಲ್ ನಲ್ಲಿ ಹಿಂದಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ಶಂಕರ್ ಈ ಕೃತ್ಯವನ್ನು ಎಸಗಿದ್ದಾನೆ. ವಿದ್ಯಾರ್ಥಿನಿ ತನ್ನನ್ನು ತಿರಸ್ಕರಿಸಿದ್ದಕ್ಕಾಗಿ ಶಂಕರ್ ಆಕೆಯ ಮನೆಯಲ್ಲೇ ಹಲ್ಲೆ ಮಾಡಿದ್ದಲ್ಲದೇ ಅವಳ ಗಂಟಲನ್ನು ಕತ್ತರಿಸಲು ಪ್ರಯತ್ನಿಸಿದ್ದಾನೆ. ಈ ಸಮಯದಲ್ಲಿ ಆಕೆ ಜೋರಾಗಿ ಕಿರುಚುಕೊಂಡಿದ್ದಾಳೆ.
ವಿದ್ಯಾರ್ಥಿನಿಯ ಕಿರುಚಾಟವನ್ನು ಆಲಿಸಿದ ಸ್ಥಳೀಯರು ಬಂದು ವಿದ್ಯಾರ್ಥಿಯನ್ನು ಕಾಮುಕ ಶಿಕ್ಷಕನಿಂದ ರಕ್ಷಣೆ ಮಾಡಿದ್ದಾರೆ. ಬಳಿಕ ಆರೋಪಿಯನ್ನು ಮರಕ್ಕೆ ಕಟ್ಟಿ ಸ್ಥಳೀಯರೇ ಥಳಿಸಿದ್ದಾರೆ. ಘಟನೆಯ ನಂತರ ಸ್ಥಳೀಯರೇ ಪೊಲೀಸರಿಗೆ ಮಾಹಿತಿಯನ್ನು ತಿಳಿಸಿ ಆರೋಪಿ ಶಂಕರ್ ನನ್ನು ಒಪ್ಪಿಸಿದ್ದಾರೆ.
ಆರೋಪಿಯಿಂದ ಕಿರುಕುಳಕ್ಕೆ ಒಳಗಾಗಿದ್ದ ವಿದ್ಯಾರ್ಥಿಯನ್ನು ಈಗ ಚಿಕಿತ್ಸೆಗಾಗಿ ಕರ್ನೂಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯರ ಥಳಿತದಿಂದ ಗಾಯಗೊಂಡಿದ್ದ ಆರೋಪಿ ಶಂಕರ್ ನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಬಳಿಕ ಆಂಧ್ರಪ್ರದೇಶದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಗಾಂತ ಶ್ರೀನಿವಾಸರಾವ್ ಶಂಕರ್ ನನ್ನು ಅಮಾನತುಗೊಳಿಸುವಂತೆ ಆದೇಶಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv