90 ಲಕ್ಷ ಕರೆಂಟ್ ಬಿಲ್, 50 ಲಕ್ಷ ಆಸ್ತಿ ತೆರಿಗೆ ಬಾಕಿ- ಆರ್ಥಿಕ ಸಂಕಷ್ಟದಲ್ಲಿದ್ಯಾ ಹಂಪಿ ಕನ್ನಡ ವಿವಿ?

Public TV
2 Min Read

ಬಳ್ಳಾರಿ: ರಾಜ್ಯ ಸರ್ಕಾರ ಜನರಿಗೆ ಒಂದರ ಹಿಂದೆ ಒಂದು ಗ್ಯಾರಂಟಿ ನೀಡುವ ಮೂಲಕ ಜನರಿಗೆ ಸಹಾಯ ಸಹಕಾರ ಮಾಡುತ್ತಿದೆ ಎಂದು ಹೇಳಿಕೊಳ್ಳುತ್ತಿದೆ. ಆದರೆ ಈ ಗ್ಯಾರಂಟಿ ಹೊಡೆತದಿಂದಾಗಿ ಅದೆಷ್ಟೋ ಕಡೆ ಅಭಿವೃದ್ಧಿ ಕುಂಠಿತವಾಗುವುದರ ಜೊತೆ ವಿವಿಧ ಇಲಾಖೆಯ ಕಾರ್ಯಗಳು ಮತ್ತು ವಿಶ್ವವಿದ್ಯಾಲಯಗಳು ನಡೆಸುವುದೇ ಕಷ್ಟವಾಗಿದೆ. ಇದಕ್ಕೆ ಉದಾಹರಣೆ ಎನ್ನುವಂತೆ ಸಮರ್ಪಕ ಅನುದಾನ ಬಾರದ ಹಿನ್ನೆಲೆ ಕರೆಂಟ್ ಬಿಲ್, ಆಸ್ತಿ ತರಿಗೆ ಮತ್ತು ನೀರಿನ ಕರ ಕಟ್ಟಲಾಗದೇ ಹಂಪಿ ಕನ್ನಡ ವಿಶ್ವವಿದ್ಯಾಲಯ (Kannada  University Hampi) ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದೆ.

ಹೌದು, ಕನ್ನಡ ನಾಡು ನುಡಿ ಸಾಹಿತ್ಯವನ್ನು ಮತ್ತಷ್ಟು ಉನ್ನತ ಸ್ಥಾನಕ್ಕೇರಿಸಬೇಕೆಂದು ಹಂಪಿ ಕನ್ನಡ ವಿವಿಯನ್ನು ಕಳೆದ ಮೂವತ್ತು ವರ್ಷಗಳ ಹಿಂದೆ ಸ್ಥಾಪನೆ ಮಾಡಲಾಯಿತು. ನೂರಾರು ಎಕರೆ ವಿಸ್ತೀರ್ಣದಲ್ಲಿರೋ ಈ ವಿವಿ ಸಂಶೋಧನಾ ವಿದ್ಯಾರ್ಥಿಗಳಿಗೆ, ಬರಹಗಾರರಿಗೆ ಮತ್ತು ಕನ್ನಡದ ಅಸ್ಮಿತೆಯನ್ನು ಉಳಿಸಿ ಬೆಳೆಸುವುದಕ್ಕೆ ಹೇಳಿ ಮಾಡಿಸಿದ ಸ್ಥಳವಾಗಿದೆ. ಆದರೆ ಇದೀಗ ಹಂಪಿ ವಿವಿ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದೆ.  ಇದನ್ನೂ ಓದಿ: ರಾಜ್ಯದಲ್ಲಿಲ್ಲ ಕನ್ನಡ ಶಾಲೆಗಳಿಗೆ ಬೇಡಿಕೆ- ಕಾಫಿನಾಡಲ್ಲಿ ಒಂದೇ ವರ್ಷಕ್ಕೆ 21 ಶಾಲೆಗಳು ಬಂದ್

ಪ್ರಸಕ್ತ ಸಾಲಿನಲ್ಲಿ 5 ಕೋಟಿ ಅನುದಾನದಲ್ಲಿ ಕೇವಲ 1.5 ಕೊಟಿ ಅನುದಾನ ಬಂದಿದೆ. ಇದರಿಂದಾಗಿ ಹಣಕಾಸಿನ ಮುಗ್ಗಟ್ಟು ತೀವ್ರವಾಗಿದೆ. ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಕರೆಂಟ್ ಬಿಲ್, ಆಸ್ತಿ ತೆರಿಗೆ ಹಾಗೂ ನೀರಿನ ಕರ ಪಾವತಿಸಲು ಹಣವಿಲ್ಲ. ಕರ ಬಾಕಿ ತುಂಬುವಂತೆ ಕಮಲಾಪುರದ ಪುರಸಭೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. 90 ಲಕ್ಷ ಕರೆಂಟ್ ಬಿಲ್, 50 ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ವಿವಿ ಬಿಲ್ ಕಟ್ಟಲಾಗದೇ ಪರದಾಡುತ್ತಿದೆ.

ಕರ್ನಾಟಕದ 50ನೇ ವರ್ಷಾಚರಣೆ ಸಂಭ್ರಮಾಚರಣೆಯಲ್ಲಿ ಕನ್ನಡದ ಅಭಿವೃದ್ಧಿಗಾಗಿರುವ ಏಕೈಕ ವಿವಿ ಸಂಕಷ್ಟದಲ್ಲಿರೋದು ಕನ್ನಡಾಭಿಮಾನಿಗಳಲ್ಲಿ ತೀವ್ರ ಅಸಮಾಧಾನ ಮೂಡಿಸಿದೆ. ಕರೆಂಟ್ ಬಿಲ್ ಪಾವತಿ ಮಾಡಲೇಬೇಕೆಂದು ಜೆಸ್ಕಾಂ ಇಲಾಖೆ ದುಂಬಾಲು ಬಿದ್ದ ಹಿನ್ನಲೆ 90 ಲಕ್ಷ ಬಾಕಿ ಹಣವನ್ನು ಪ್ರತಿ ತಿಂಗಳು 10 ಲಕ್ಷದಂತೆ ಕಟ್ಟಲು ವಿವಿ ಪ್ಲ್ಯಾನ್ ಮಾಡಿಕೊಂಡಿದೆ. ಈ ಮಧ್ಯೆ ಕನ್ನಡ ವಿವಿಗೆ 9.21 ಕೋಟಿ ಹೆಚ್ಚುವರಿ ಅನುದಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಜಯನಗರ ಉಸ್ತುವಾರಿ ಸಚಿವ ಜಮೀರ್ ಪತ್ರ ಬರೆದಿದ್ದಾರೆ. ಈ ಮಧ್ಯೆ ನಾಡಿದ್ದು ಸಿಎಂ ಸಿದ್ದರಾಮಯ್ಯನವರು ಹಂಪಿಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಮುಖ್ಯಮಂತ್ರಿಗಳಿಗೆ ಕನ್ನಡ ವಿಶ್ವವಿದ್ಯಾಲಯ ಎದುರಿಸುತ್ತಿರುವ ಆರ್ಥಿಕ ಬಿಕ್ಕಟ್ಟಿನ ಬಗ್ಗೆ ವಿವರಿಸಲು ಆಡಳಿತ ಮಂಡಳಿ ಚಿಂತನೆ ನಡೆಸಿದೆ.

ಕನ್ನಡನಾಡು ನುಡಿ ಜಲದ ವಿಚಾರದಲ್ಲಿ ರಾಜಿ ಆಗೋ ಪ್ರಶ್ನೆಯೇ ಇಲ್ಲ. ಕನ್ನಡವನ್ನು ಉಳಿಸಿ ಬೆಳೆದೋದು ನಮ್ಮೆಲ್ಲರ ಕತ್ರ್ಯವ್ಯ ಎನ್ನುತ್ತಿರೋ ಮುಖ್ಯಮಂತ್ರಿ ಸಿದ್ದರಾಮಯ್ಯನವರು (Siddaramaiah) ಇದೀಗ ಕನ್ನಡಕ್ಕಾಗಿಯೇ ಇರುವ ಏಕೈಕ ವಿವಿಯನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಬೇಕಿದೆ ಎನ್ನುವುದು ನಾಡಿನ ಎಲ್ಲ ಕನ್ನಡಾಭಿಮಾನಿಗಳ ಆಗ್ರಹವಾಗಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್