ಕೊಪ್ಪಳ: ಮಲೆನಾಡಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಟಿಬಿ ಡ್ಯಾಂಗೆ (TB Dam) ಒಳಹರಿವು ಹೆಚ್ಚಾಗಿದೆ. ಹೀಗಾಗಿ ಡ್ಯಾಂನ 26 ಗೇಟ್‌ಗಳಿಂದ 90,893 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಹಂಪಿ (Hampi) ಸ್ಮಾರಕಗಳಿಗೆ ಮುಳುಗಡೆ ಭೀತಿ ಎದುರಾಗಿದೆ.ಇದನ್ನೂ ಓದಿ: ಮಳೆಯಬ್ಬರ – ರಾಜ್ಯದ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಾಗಿದ್ದು, ತುಂಗಭದ್ರಾ ಜಲಾಶಯಕ್ಕೆ ಒಳಹರಿವಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ಒಳಹರಿವು ಹೆಚ್ಚಾದ ಹಿನ್ನೆಲೆ ಸದ್ಯ ಜಲಾಶಯದಿಂದ 90,893 ಕ್ಯೂಸೆಕ್ ನೀರು ರಿಲೀಸ್ ಮಾಡಲಾಗಿದೆ. ಜಲಾಶಯದ 33 ಗೇಟ್‌ಗಳ ಪೈಕಿ 26 ಕ್ರಸ್ಟ್ ಗೇಟ್‌ಗಳ ಮೂಲಕ ನೀರು ಬಿಡಲಾಗುತ್ತಿದೆ.
ಏಕಾಏಕಿ ನೀರನ್ನು ಬಿಡುಗಡೆ ಮಾಡಿದ್ದು, ತುಂಗಭದ್ರಾ ನದಿ (Tungabhadra River) ಪಾತ್ರದಲ್ಲಿ ಪ್ರವಾಹದ ಭೀತಿ ಹೆಚ್ಚಾಗಿದೆ. ಹೀಗಾಗಿ ನದಿ ಪಾತ್ರದ ಗ್ರಾಮಗಳ ಜನರು ನದಿ ತೀರಕ್ಕೆ ಹೋಗದಂತೆ ಟಿಬಿ ಬೋರ್ಡ್ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಒಂದು ವೇಳೆ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾದರೆ, ಇನ್ನಷ್ಟು ಪ್ರಮಾಣದ ನೀರನ್ನು ನದಿಗೆ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸದ್ಯ 90,893 ಸಾವಿರ ಕ್ಯೂಸೆಕ್ ನೀರು ರಿಲೀಸ್ ಮಾಡಿರುವುದರಿಂದ ಹಂಪಿಯ ಕೆಲ ಸ್ಮಾರಕಗಳಿಗೆ ಮುಳುಗಡೆ ಭೀತಿ ಎದುರಾಗಿದೆ.ಇದನ್ನೂ ಓದಿ: ಬೆಂಗಳೂರಲ್ಲಿ ಚಿನ್ನದಂಗಡಿ ದರೋಡೆ ಕೇಸ್ – ಟಾಯ್ ಗನ್ ತೋರಿಸಿ ಚಿನ್ನ ರಾಬರಿ