ಬೆಂಗಳೂರು: ಇಂದು ಕರ್ನಾಟಕದಲ್ಲಿ 958 ಮಂದಿಗೆ ಕೊರೊನಾ ಬಂದಿದ್ದು, ಆಸ್ಪತ್ರೆಯಿಂದ 1,206 ಜನ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 9 ಮಂದಿ ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 9,12,340ಕ್ಕೆ ಏರಿಕೆ ಆಗಿದೆ. ಈ ಪೈಕಿ 8,86,547 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 13,736 ಸಕ್ರಿಯ ಪ್ರಕರಣಗಳಿವೆ.
ವಿಮಾನ ನಿಲ್ದಾಣದಲ್ಲಿ ಮಂಗಳವಾರ ಒಟ್ಟು 1,441 ಮಂದಿ ತಪಾಸಣೆಗೆ ಒಳಗಾಗಿದ್ದಾರೆ. ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು 12,038 ಮಂದಿ ಕೊರೊನಾಗೆ ಬಲಿಯಾಗಿದ್ದು, ಸದ್ಯ 217 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು 9,770 ಆಂಟಿಜನ್ ಟೆಸ್ಟ್, 90,173 ಆರ್‌ಟಿ ಪಿಸಿಆರ್ ಸೇರಿದಂತೆ 99,943 ಪರೀಕ್ಷೆ ಮಾಡಲಾಗಿದೆ. ಒಟ್ಟು ರಾಜ್ಯದಲ್ಲಿ ಇಲ್ಲಿಯವರೆಗೆ 1,33,17,070 ಕೊರೊನಾ ಪರೀಕ್ಷೆ ಮಾಡಲಾಗಿದೆ.
ಎಂದಿನಂತೆ ಬೆಂಗಳೂರು ನಗರದಲ್ಲಿ 550 ಮಂದಿಗೆ ಸೋಂಕು ಬಂದಿದ್ದು 2 ಮಂದಿ ಮೃತಪಟ್ಟಿದ್ದಾರೆ. ಉಳಿದಂತೆ ತುಮಕೂರು 50. ಮೈಸೂರು 43, ಚಾಮರಾಜನಗರ 27 ಮಂದಿಗೆ ಸೋಂಕು ಬಂದಿದೆ.
ಐಸಿಯುನಲ್ಲಿಒಟ್ಟು 217 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಬೆಂಗಳೂರು ನಗರದಲ್ಲಿ 101, ತುಮಕೂರು 10, ಕಲಬುರಗಿಯಲ್ಲಿ 14 ಮಂದಿ ಇದ್ದಾರೆ.