ರಾತ್ರಿ ಶೌಚಾಲಯಕ್ಕೆ ಹೋದ ವಿದ್ಯಾರ್ಥಿನಿ ಮುಂಜಾನೆ ಶವವಾಗಿ ಪತ್ತೆ!

Public TV
1 Min Read

ಬೆಂಗಳೂರು: ಪ್ರತಿಷ್ಠಿತ ವಸತಿ ಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನಲ್ಲಿ ನಡೆದಿದೆ.

ವೈಶಾಲಿ(14) ಅನುಮಾನಾಸ್ಪದವಾಗಿ ಮೃತಪಟ್ಟ ವಿದ್ಯಾರ್ಥಿನಿ. ಈಕೆ ಸರ್ಜಾಪುರ ಸಮೀಪದ ಇಂಡಸ್ ವ್ಯಾಲಿ ಎಂಬ ಖಾಸಗಿ ಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಬುಧವಾರ ರಾತ್ರಿ ಶೌಚಾಲಯಕ್ಕೆ ಹೋಗಿದ್ದ ಈಕೆ, ಅದೇ ಜಾಗದಲ್ಲಿ ಗುರುವಾರ ಬೆಳಗ್ಗೆ ಸಿಬ್ಬಂದಿಗೆ ಶವವಾಗಿ ಪತ್ತೆಯಾಗಿದ್ದಾಳೆ.

ಈ ಸಂಬಂಧ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿನಿಯ ಸಾವಿನ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗುತ್ತಿದೆ. ಇತ್ತ ಪೋಷಕರನ್ನು ಮಾಧ್ಯಮದವರ ಬಳಿ ಮಾತನಾಡದಂತೆ ಶಾಲಾ ಆಡಳಿತ ಮಂಡಳಿ ಹಿಡಿದಿಟ್ಟುಕೊಂಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

Share This Article
Leave a Comment

Leave a Reply

Your email address will not be published. Required fields are marked *