ಕಾಂಗ್ರೆಸ್‌ನ ಮಾಜಿ ಶಾಸಕ ಎಸ್‌.ಎನ್.ಪಾಟೀಲ ನಿಧನ

Public TV
1 Min Read

ಗದಗ: ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಮಾಜಿ ಶಾಸಕ ಎಸ್‌.ಎನ್.ಪಾಟೀಲ (81) ಇಂದು ಬೆಳಗಿನ ಜಾವ ಹುಬ್ಬಳ್ಳಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅನಾರೋಗ್ಯ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಅವರು ಕೊನೆಯುಸಿರೆಳೆದಿದ್ದಾರೆ. ಇಂದು ಸಂಜೆ 4 ಗಂಟೆಗೆ ಸ್ವಗ್ರಾಮ ಪುಟಗಾಂವ್ ಬಡ್ನಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಇದನ್ನೂ ಓದಿ: ನಕಲಿ ಡಾಕ್ಟರ್ ಎಡವಟ್ಟು – ಜ್ವರ ಎಂದು ಹೋದ ಮಹಿಳೆ ಕಾಲಿಗೆ ಗಂಡಾಂತರ

ಸರಳ, ಸಜ್ಜನಿಕೆ, ನೇರ-ನಿಷ್ಠುರ ವ್ಯಕ್ತಿತ್ವ ಹೊಂದಿದ್ದ ಎಸ್‌.ಎನ್.ಪಾಟೀಲ (S.N.Patil) ಅವರು ಪತ್ನಿ ಹಾಗೂ ಇಬ್ಬರು ಪುತ್ರರು ಸೇರಿ ಅಪಾರ ಬಂಧುಗಳನ್ನು ಅಗಲಿದ್ದಾರೆ. 1989-1994 ರ ಅವಧಿಯಲ್ಲಿ ಕಾಂಗ್ರೆಸ್‌ನಿಂದ (Congress) ಪಾಟೀಲ ಅವರು ಶಾಸಕರಾಗಿದ್ದರು. ಎಲ್ಲಾ ಪಕ್ಷಗಳ ನಾಯಕರ ಜೊತೆ ಅನ್ಯೂನ್ಯವಾಗಿದ್ದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *