ಸುಮಲತಾ ಬಿಜೆಪಿ ಸೇರ್ಪಡೆ ಬಗ್ಗೆ ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ

Public TV
1 Min Read

ಚಾಮರಾಜನಗರ: ಮಂಡ್ಯದ ಸಂಸದೆ ಸುಮಲತಾ (Sumalatha Ambareesh) ಅವರು ಬಿಜೆಪಿ (BJP) ಸೇರ್ಪಡೆಯಾಗುವ ಬಗ್ಗೆ ಪಕ್ಷದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ತಿಳಿಸಿದ್ದಾರೆ.

`ಮಂಡ್ಯದಲ್ಲಿ (Mandya) ಬಿಜೆಪಿ ಫ್ಲೆಕ್ಸ್‌ಗಳಲ್ಲಿ ಸುಮಲತಾ ಫೋಟೋ’ ವಿಚಾರಕ್ಕೆ ಸಂಬಂಧಿಸಿದಂತೆ ಚಾಮರಾಜನಗರದಲ್ಲಿ (Chamarajanagar) ಸುದ್ದಿಗಾರರೊಂದಿಗೆ ಅವರು ಮಾತನಾಡಿದ್ದಾರೆ. ಸಂಸದೆ ಸುಮಲತಾ ಅವರು ಬಿಜೆಪಿ ಸೇರ್ಪಡೆಯಾಗುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಬಿಜೆಪಿ ಫ್ಲೆಕ್ಸ್‌ಗಳಲ್ಲಿ ಅವರ ಹಿತೈಷಿಗಳು ಫೋಟೋ ಹಾಕಿಸಿರಬಹುದು ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಅಸೆಂಬ್ಲಿ ಎಲೆಕ್ಷನ್ ಮೇಲೆ ಬಿಜೆಪಿ ಚಾಣಾಕ್ಯನ ಕಣ್ಣು- ಇಂದಿನಿಂದ ಅಮಿತ್ ಶಾ ರಾಜ್ಯ ಪ್ರವಾಸ

ಇದೇ ವೇಳೆ ಸುವರ್ಣಸೌಧದಲ್ಲಿ ಸಾವರ್ಕರ್ ಫೋಟೊ ಹಾಕಿದ್ದನ್ನು (Savarkar Photo Controversy) ಸಮರ್ಥಿಸಿಕೊಂಡ ಕಟೀಲ್, ಕಾಂಗ್ರೆಸ್ (Congress) ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ಸಾವರ್ಕರ್ ದೇಶಭಕ್ತ. ನಾವು ದೇಶಭಕ್ತರ ಪರವಾಗಿ ವಾದ ಮಾಡುತ್ತೇವೆ. ಆದ್ರೆ ಕಾಂಗ್ರೆಸ್‌ನವರು ರಾಷ್ಟ್ರ ವಿರೋಧಿಗಳ ಪರವಾಗಿ ವಾದ ಮಾಡ್ತಾರೆ. ಕುಕ್ಕರ್ ಹಿಡಿದುಕೊಂಡು ಬಂದವನ ಪರವಾಗಿ ವಾದ ಮಾಡ್ತಾರೆ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ನಾಳೆ ಮಂಡ್ಯಗೆ ಅಮಿತ್ ಶಾ- ಹಳೆ ಮೈಸೂರು ಭಾಗದ ಮೇಲೆ ಬಿಜೆಪಿ ಕಣ್ಣು

ವಿಧಾನಸಭೆಯಲ್ಲಿ ಉತ್ತರ ಕರ್ನಾಟಕದ ಕಡೆಗಣನೆ ಎಂಬ ಸತೀಶ್ ಜಾರಕಿಹೊಳಿ (Satish Jarkiholi) ಆರೋಪಕ್ಕೆ ಪ್ರತಿಕ್ರಿಯಿಸಿ, ಚರ್ಚೆಗೆ ಅವರೇ ಅವಕಾಶ ಕೊಡಬೇಕು. ಹೊರಗಡೆ ನಿಂತು ಮಾತನಾಡುವುದಲ್ಲ. ಸತೀಶ್ ಜಾರಕಿಹೊಳಿ ಒಬ್ಬ ಜವಬ್ದಾರಿಯುತ ಶಾಸಕ. ಅವರು ವಿಧಾನಸಭೆಯಲ್ಲಿ ಉತ್ತರ ಕರ್ನಾಟಕದ (UttarKarnataka) ಬಗ್ಗೆ ಮಾತನಾಡಬೇಕು. ಆದ್ರೆ ಚರ್ಚೆ ಮಾಡೋದಕ್ಕೆ ಅವರು ಅವಕಾಶ ಕೇಳಿಲ್ಲ. ಅವಕಾಶ ಸಿಕ್ಕಾಗ ಕಾಂಗ್ರೆಸ್ ನವರು ಬೀದಿಯಲ್ಲಿ ಹೋರಾಟ ಮಾಡುತ್ತಾರೆ. 4 ವರ್ಷಗಳಿಂದ ಯಾವ ಜನಪರ ಹೋರಾಟ ಮಾಡಿದ್ದಾರೆ? ಅವಕಾಶ ಸಿಕ್ಕಾಗೆಲ್ಲಾ ಪಲಾಯನವಾದ ಮಾಡ್ತಿದ್ದಾರೆ ಎಂದು ತಿವಿದಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *