ಪ್ರಜ್ವಲ್ ದೇವರಾಜ್ ನಟನೆಯ ‘ವೀರಂ’ ಸಿನಿಮಾ ರಿಲೀಸ್ ಡೇಟ್ ಫಿಕ್ಸ್

Public TV
1 Min Read

ಚಿತಾ ರಾಮ್ (Rachita Ram) ಮತ್ತು ಪ್ರಜ್ವಲ್ ದೇವರಾಜ್ (Prajwal Devaraj) ಕಾಂಬಿನೇಷನ್ ನ ‘ವೀರಂ’ (Veeram) ಸಿನಿಮಾದ ಬಿಡುಗಡೆ (Release) ದಿನಾಂಕ ಘೋಷಣೆಯಾಗಿದೆ. ಏಪ್ರಿಲ್ 7 ರಂದು ರಾಜ್ಯಾದ್ಯಂತ ಸಿನಿಮಾ ಬಿಡುಗಡೆ ಮಾಡುವುದಾಗಿ ನಿರ್ಮಾಪಕ ಶಶಿಧರ್ ಕೆ.ಎಂ (Shashidhar) ತಿಳಿಸಿದ್ದಾರೆ. ದೊಡ್ಡಮಟ್ಟದಲ್ಲಿ ಥಿಯೇಟರ್ ಗೆ  ಈ ಸಿನಿಮಾ ತರುವ ಕುರಿತು ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದಾರೆ. ಅಂದುಕೊಂಡಂತೆ ಆಗಿದ್ದರೆ ಕಳೆದ ವರ್ಷವೇ ಈ ಚಿತ್ರ ಬಿಡುಗಡೆ ಆಗಬೇಕಿತ್ತು. ಕೋವಿಡ್ ಕಾರಣದಿಂದಾಗಿ ಮುಂದೂಡಲಾಗಿತ್ತು.

ನಾನಾ ಕಾರಣಗಳಿಂದಾಗಿ ಈ ಸಿನಿಮಾ ಕುತೂಹಲ ಮೂಡಿಸಿದೆ. ಮೊದಲ ಬಾರಿಗೆ ಪ್ರಜ್ವಲ್ ಮತ್ತು ರಚಿತಾ ಒಟ್ಟಿಗೆ ತೆರೆಯ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾದಲ್ಲಿ ಪ್ರಜ್ವಲ್, ಸಾಹಸಸಿಂಹ ವಿಷ್ಣುವರ್ಧನ್ ಅವರ ಅಭಿಮಾನಿಯಾಗಿ ಕಾಣಿಸಿಕೊಂಡಿದ್ದಾರೆ. ಅದಕ್ಕಾಗಿ ಅವರು ಕೈ ಮೇಲೆ ವಿಷ್ಣು ಟ್ಯಾಟೂ ಕೂಡ ಹಾಕಿಸಿಕೊಂಡಿದ್ದರು. ಈಗಾಗಲೇ ರಿಲೀಸ್ ಆಗಿರುವ ಪೋಸ್ಟರ್ ನಲ್ಲೂ ಈ ವಿಷಯವನ್ನು ಬಹಿರಂಗ ಪಡಿಸಿದ್ದರು. ಇದನ್ನೂ ಓದಿ: ರಿಷಬ್ ಶೆಟ್ಟಿ ಮಗಳ ಬರ್ತ್‌ಡೇ ಸಂಭ್ರಮದಲ್ಲಿ ಸ್ಯಾಂಡಲ್‌ವುಡ್ ತಾರೆಯರು

ಪ್ರಜ್ವಲ್ ಈ ಸಿನಿಮಾದಲ್ಲಿ ಮಾಸ್ ಮತ್ತು ಕ್ಲಾಸ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲದೇ ಮನೆಮಂದಿ ಕೂತು ನೋಡುವಂತಹ ಕಥೆಯನ್ನು ಈ ಚಿತ್ರದಲ್ಲಿ ಹೇಳಲಿದ್ದಾರೆ ನಿರ್ದೇಶಕ ಖದರ್ ಕುಮಾರ್. ಅನೂಪ್ ಸಿಳೀನ್ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬಂದಿದ್ದು, ಶ್ರೀನಗರ ಕಿಟ್ಟಿ, ಶ್ರುತಿ ಸೇರಿದಂತೆ ನುರಿತ ತಾರಾಬಳಗವೇ ಈ ಸಿನಿಮಾದಲ್ಲಿದೆ.

Share This Article
Leave a Comment

Leave a Reply

Your email address will not be published. Required fields are marked *