ಸಿಲಿಕಾನ್‌ ವ್ಯಾಲಿ ಬ್ಯಾಂಕ್‌ನಂತೆ ಅಮೆರಿಕದ 186 ಬ್ಯಾಂಕ್‌ಗಳು ಅಪಾಯದಲ್ಲಿ – ಅಧ್ಯಯನ

Public TV
1 Min Read

ನ್ಯೂಯಾರ್ಕ್: ಅಮೆರಿಕದ (America) ಸಿಲಿಕಾನ್‌ ವ್ಯಾಲಿ ಬ್ಯಾಂಕ್‌ (Silicon Valley Bank) ನಷ್ಟದಿಂದಾಗಿ ಬಾಗಿಲು ಮುಚ್ಚಿದೆ. ಅದೇ ರೀತಿ ದೇಶದ 186 ಬ್ಯಾಂಕ್‌ಗಳು ಅಪಾಯದಲ್ಲಿವೆ ಎಂದು ಅಧ್ಯಯನವೊಂದು ತಿಳಿಸಿದೆ. ವಿಮೆ ಮಾಡಿಸದೇ ಇರುವ ಠೇವಣಿಗಳು ಹಾಗೂ ಹೆಚ್ಚುತ್ತಿರುವ ಬಡ್ಡಿದರಗಳೇ ಇದಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ.

ಸಾಮಾಜಿಕ ವಿಜ್ಞಾನ ಸಂಶೋಧನಾ ನೆಟ್‌ವರ್ಕ್ (Social Science Research Network) ಅಧ್ಯಯನವು ಈ ಮಾಹಿತಿಯನ್ನು ಬಹಿರಂಗಪಡಿಸಿದೆ. 186 ಬ್ಯಾಂಕ್‌ಗಳು ವಿಮೆ ಮಾಡದ ಠೇವಣಿದಾರರಲ್ಲಿ ಅರ್ಧದಷ್ಟು ಹಣವನ್ನು ಹಿಂಪಡೆದರೆ ವಿಫಲವಾಗಬಹುದು ಎಂದು ಉಲ್ಲೇಖಿಸಿದೆ. ಇದನ್ನೂ ಓದಿ: ನನ್ನನ್ನು ಕೋರ್ಟ್‌ನಲ್ಲೂ ಕೊಲ್ಬೋದು – ಪಾಕ್ ನ್ಯಾಯಮೂರ್ತಿಗೆ ಪತ್ರ ಬರೆದ ಇಮ್ರಾನ್ ಖಾನ್

ಗ್ರಾಹಕರ ಠೇವಣಿ ಹಣವನ್ನು ಬಾಂಡ್‌ ಖರೀದಿಗೆ ಬ್ಯಾಂಕ್‌ ಬಳಸಿತು. ಬಾಂಡ್‌ಗಳಿಂದ ಬರಬೇಕಿದ್ದ ಆದಾಯ ಕುಸಿದಿದ್ದರಿಂದ ಬ್ಯಾಂಕ್‌ಗಳು ಸಂಕಷ್ಟಕ್ಕೆ ಸಿಲುಕಿವೆ. ಅಲ್ಲದೇ ಅಮೆರಿಕದ ಕೇಂದ್ರೀಯ ಬ್ಯಾಂಕ್‌ ಫೆಡರಲ್ ರಿಸರ್ವ್, ಬಡ್ಡಿದರಗಳಲ್ಲಿ ಏರಿಕೆ ಮಾಡಿದೆ. ಇದರಿಂದ ನವೋದ್ಯಮಗಳು ಸಹ ಬಂದ್‌ ಆಗುತ್ತಿವೆ. ಪರಿಣಾಮವಾಗಿ ಬ್ಯಾಂಕ್‌ಗಳು ಸಂಕಷ್ಟದ ಸುಳಿಗೆ ಸಿಲುಕಿವೆ ಎಂದು ಅಧ್ಯಯನ ವರದಿಯಲ್ಲಿ ತಿಳಿಸಿದೆ.

ನವೋದ್ಯಮಗಳಿಗೆ ಹಣಕಾಸಿನ ನೆರವು ನೀಡುತ್ತಿದ್ದ ಅಮೆರಿಕದ ಸಿಲಿಕಾನ್‌ ವ್ಯಾಲಿ ಬ್ಯಾಂಕ್‌ ದಿವಾಳಿಯಾಗಿ ಕೆಲ ದಿನಗಳ ಹಿಂದೆಯಷ್ಟೇ ಬಾಗಿಲು ಮುಚ್ಚಿತು. ಇದರ ಬೆನ್ನಲ್ಲೇ ಸಿಗ್ನೇಚರ್‌ ಬ್ಯಾಂಕ್‌ ಸಹ ಆರ್ಥಿಕ ಸಂಕಷ್ಟದಿಂದ ಬಂದ್‌ ಆಯಿತು. ಹೀಗಾಗಿ ಅಮೆರಿಕದ ಹಲವು ಬ್ಯಾಂಕ್‌ಗಳ ಆರ್ಥಿಕ ಪರಿಸ್ಥಿತಿ ಕುರಿತು ಸಂಶೋಧನೆ ನಡೆಸಲಾಗಿದೆ. ಇದನ್ನೂ ಓದಿ: 92ನೇ ವಯಸ್ಸಿನಲ್ಲಿ 5ನೇ ಮದುವೆ – ಇದು ಕೊನೆಯದ್ದು ಎಂದ ಮುರ್ಡೋಕ್‌

Share This Article
Leave a Comment

Leave a Reply

Your email address will not be published. Required fields are marked *