ಬ್ಯುಸಿನೆಸ್ ನಲ್ಲಿ ದಾಖಲೆ ಬರೆದ ‘ಸ್ಪೈ’ ಸಿನಿಮಾ

Public TV
1 Min Read

ಕಾರ್ತಿಕೇಯ-2 ಬ್ಲಾಕ್ ಬಸ್ಟರ್ ಹಿಟ್ ಬಳಿಕ ನಿಖಿಲ್ ಸಿದ್ಧಾರ್ಥ್ (Nikhil Siddharth) ನಟಿಸ್ತಿರುವ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಸ್ಪೈ (Spy) ಬಿಡುಗಡೆಗೆ ಸಜ್ಜಾಗುತ್ತಿದೆ. ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಈ ಚಿತ್ರ ಪ್ರೀ ರಿಲೀಸ್ ಬ್ಯುಸಿನೆಸ್ ನಲ್ಲಿ ದಾಖಲೆ ಬರೆದಿದೆ. ಖ್ಯಾತ ನಿರ್ದೇಶಕ ಹಾಗೂ ಸಂಕಲನಕಾರರು ಆಗಿರುವ ಗ್ಯಾರಿ ಬಿ ಹೆಚ್ (Gary BH) ಸ್ಪೈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ.

ಎವರು ಮತ್ತು ಹಿಟ್ ಸಿನಿಮಾಗಳ ನಿರ್ಮಾಪಕ ಕೆ.ರಾಜಶೇಖರ್ ರೆಡ್ಡಿ ED ಎಂಟರ್‌ಟೈನ್‌ಮೆಂಟ್‌ನಡಿ ಚರಣ್ ರಾಜ್ ಉಪ್ಪಲಪತಿ ಜೊತೆಗೂಡಿ ಅದ್ಧೂರಿಯಾಗಿ ನಿರ್ಮಿಸಿರುವ ಈ ಸಿನಿಮಾ ಥಿಯೇಟರ್ ಹಕ್ಕು ಹೊರತುಡಪಡಿಸಿ ಉಳಿದೆಲ್ಲಾ ಹಕ್ಕುಗಳು ದಾಖಲೆ ಮೊತ್ತಕ್ಕೆ ಮಾರಾಟವಾಗಿದೆ. ಅಮೇಜಾನ್ ಹಾಗೂ ಸ್ಟಾರ್ ನೆಟ್ವರ್ಕ್ ಜೊತೆಗೂಡಿ ಸ್ಪೈ ಸಿನಿಮಾದ ನಾನ್ ಥಿಯೇಟ್ರಿಕಲ್ ಹಕ್ಕನ್ನು 40 ಕೋಟಿಗೆ ಖರೀದಿ ಮಾಡಿದೆ.  ಇದನ್ನೂ ಓದಿ: ಸುದೀಪ್ ಖಾಸಗಿ ವಿಡಿಯೋ ಬೆದರಿಕೆ ಹಿಂದೆ ಕಾರು ಡ್ರೈವರ್ ಇರುವ ಶಂಕೆ

ಸ್ಪೈ ಸಿನಿಮಾದ ಪೋಸ್ಟರ್ ಹಾಗೂ ಗ್ಲಿಂಪ್ಸ್ ನಿರೀಕ್ಷೆ ಹೆಚ್ಚಿಸಿದ್ದು, ನಿಖಿಲ್‌ ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ತೆಲುಗು, ಕನ್ನಡ, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ‌ ಮೂಡಿ ಬರ್ತಿರುವ ಚಿತ್ರಕ್ಕೆ ರಾಜಶೇಖರ್ ರೆಡ್ಡಿ  ನಿರ್ಮಾಣದ ಜೊತೆಗೆ ಕಥೆ ಕೂಡ ಬರೆದಿದ್ದು, ಗ್ಯಾರಿ ಬಿ.ಎಚ್. ನಿರ್ದೇಶನದ ಜೊತೆಗೆ ಸಂಕಲನದ ಹೊಣೆ ಹೊತ್ತಿದ್ದಾರೆ. ಆಕ್ಷನ್ ಪ್ಯಾಕ್ಡ್ ಸ್ಪೈ ಥ್ರಿಲ್ಲರ್ ಸಿನಿಮಾದಲ್ಲಿ‌ ನಿಖಿಲ್‌ಗೆ ಜೋಡಿಯಾಗಿ ಐಶ್ವರ್ಯ ಮೆನನ್ ನಾಯಕಿಯಾಗಿ ನಟಿಸಲಿದ್ದಾರೆ.

ಹೈ ಬಜೆಟ್‌ನಲ್ಲಿ ತಯಾರಾಗಲಿರುವ ಸ್ಪೈ ಸಿನಿಮಾಗೆ ಹಾಲಿವುಡ್ ತಂತ್ರಜ್ಞರ ಮೆರಗು ಸಿಕ್ಕಿದೆ. ಜೂನಿಯನ್ ಅಮರು ಸೂರಿಸೆಟ್ಟಿ ಛಾಯಾಗ್ರಹಣ, ಶ್ರೀಚರಣ್ ಪಕಳ ಸಂಗೀತ, ಅರ್ಜುನ್ ಸೂರಿಸೆಟ್ಟಿ ಕಲಾ ನಿರ್ದೇಶನ ಸಿನಿಮಾಕ್ಕಿದೆ. ಈ ಸಿನಿಮಾ ಜೊತೆಗೆ ED ಎಂಟರ್‌ಟೈನ್ಮೆಂಟ್ ಬ್ಯಾನರ್‌ನಡಿ ಮತ್ತೆರಡು ಹೊಸ ಪ್ರಾಜೆಕ್ಟ್ ತಯಾರಾಗಲಿದ್ದು, ಡಿಜೆ ಟಿಲ್ಲು ಖ್ಯಾತಿಯ ನಿರ್ದೇಶಕ ವಿಮಲ್ ಕೃಷ್ಣ ನಿರ್ದೇಶನಲ್ಲೊಂದು ಸಿನಿಮಾ ಬರಲಿದೆ.

Share This Article