‘ಸಲಾರ್’ ಸಿನಿಮಾದಲ್ಲಿ ಮತ್ತೊಬ್ಬ ಕನ್ನಡದ ಸ್ಟಾರ್ ನಟ

Public TV
1 Min Read

ಪ್ರಶಾಂತ್ ನೀಲ್ (Prashant Neel) ನಿರ್ದೇಶನದ, ತೆಲುಗಿನ ಖ್ಯಾತ ನಟ ಪ್ರಭಾಸ್ (Prabhas) ನಟನೆಯ ‘ಸಲಾರ್’ (Salar) ಸಿನಿಮಾದಲ್ಲಿ ಈಗಾಗಲೇ ಕನ್ನಡದ ನಟ ಪ್ರಮೋದ್ (Pramod) ನಟಿಸಿದ್ದಾರೆ ಎನ್ನುವುದನ್ನು ಎಕ್ಸ್ ಕ್ಲೂಸಿವ್ ಆಗಿ ಪಬ್ಲಿಕ್ ಟಿವಿ ಡಿಜಿಟಲ್ ಪ್ರಕಟಿಸಿತ್ತು. ಇದೀಗ ಮತ್ತೋರ್ವ ಕನ್ನಡದ ಖ್ಯಾತ ನಟ ಈ ಸಿನಿಮಾದಲ್ಲಿ ನಟಿಸಿದ್ದಾರೆ ಎನ್ನುವುದು ಬಹಿರಂಗವಾಗಿದೆ. ಈ ವಿಷಯವನ್ನು ಸ್ವತಃ ಅವರೇ ಹೇಳಿಕೊಂಡಿದ್ದಾರೆ.

ಖಳನಟನಾಗಿ, ನಾಯಕ ನಟನಾಗಿ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿರುವ ದೇವರಾಜ್ (Devaraj), ಸಲಾರ್ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಮಾಹಿತಿಯನ್ನು ಅವರೇ ಹಂಚಿಕೊಂಡಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿರುವ ಅವರು ‘ನಾನು ಸಲಾರ್ ಸಿನಿಮಾದಲ್ಲಿ ನಟಿಸಿದ್ದೇನೆ’ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ನಟ ಚೇತನ್‌ ಭಾರತದ ವೀಸಾ ರದ್ದು

ದೇವರಾಜ್ ಅವರು ಯಾವ ರೀತಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನುವ ಕುರಿತು ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ. ಆ ಕುರಿತು ಏನೂ ಹೇಳಲಾರೆ ಎಂದಷ್ಟೇ ಉತ್ತರಿಸಿದ್ದಾರೆ. ಸಿನಿಮಾದ ಮೊದಲರ್ಧ ಕಡಿಮೆ ಅವಧಿಯಲ್ಲಿ ಕಾಣಿಸಿಕೊಳ್ಳುವೆ, ದ್ವಿತೀಯಾರ್ಧದಲ್ಲಿ ಹೆಚ್ಚು ಸಮಯ ತೆರೆಯ ಮೇಲೆ ಇರುತ್ತೇನೆ ಎಂದೂ ಅವರು ಮಾತನಾಡಿದ್ದಾರೆ.

ಪ್ರಶಾಂತ್ ನೀಲ್ ತೆಲುಗಿನಲ್ಲಿ ಸಿನಿಮಾ ಮಾಡುತ್ತಿದ್ದರೂ, ಕನ್ನಡದ ಅನೇಕ ಕಲಾವಿದರನ್ನು ಮತ್ತು ತಂತ್ರಜ್ಞರನ್ನು ಆ ಚಿತ್ರಕ್ಕಾಗಿ ಬಳಸಿಕೊಂಡಿದ್ದಾರೆ. ಸಿನಿಮಾಟೋಗ್ರಾಫರ್, ಸಂಕಲನಕಾರ ಹೀಗೆ ಅನೇಕ ಕನ್ನಡದ ತಂತ್ರಜ್ಞರೇ ಈ ಚಿತ್ರಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಜೊತೆಗೆ ಅನೇಕ ಕಲಾವಿದರು ಕೂಡ ಸಲಾರ್ ನಲ್ಲಿ ಕಾಣಿಸಿಕೊಂಡಿದ್ದಾರೆ.

Share This Article