ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿ ಸಾವು

Public TV
1 Min Read

ಶಿವಮೊಗ್ಗ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವಿಚಾರಣಾಧೀನ ಕೈದಿ (Prisoner) ಸಾವನ್ನಪ್ಪಿದ ಘಟನೆ ಶಿವಮೊಗ್ಗದ (Shivamogga) ಕೇಂದ್ರ ಕಾರಾಗೃಹದಲ್ಲಿ (Central Jail) ನಡೆದಿದೆ.

ಆರೋಪಿ ಕಲೀಂ (37) ಮೃತಪಟ್ಟ ಕೈದಿ. ಈತನನ್ನು ಕಳೆದ ಒಂದು ತಿಂಗಳ ಹಿಂದೆ ಪೋಕ್ಸೋ (POCSO) ಕಾಯ್ದೆಯಡಿ ಬಂಧಿಸಲಾಗಿತ್ತು. ಕಲೀಂ ಕಿಡ್ನಿ ಸಮಸ್ಯೆ, ಲೋ ಬಿಪಿ, ವಾಂತಿ ಮತ್ತು ಭೇದಿಯಿಂದ ಬಳಲುತ್ತಿದ್ದ. ಅನಾರೋಗ್ಯ ಉಂಟಾದ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ಈತನನ್ನು ನಗರದ ಮೆಗ್ಗಾನ್ (Meggan) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ. ಇದನ್ನೂ ಓದಿ: ಪತ್ನಿಯನ್ನು ಸ್ಕ್ಯಾನ್ ಮಾಡಲು 15 ನಿಮಿಷ ತೆಗೆದುಕೊಂಡಿದ್ದಕ್ಕೆ ಸಂಶಯಪಟ್ಟು ಹತ್ಯೆಗೆ ಸುಪಾರಿ ಕೊಟ್ಟ ಪತಿ 

ಕಲೀಂ ಸಾವಿನ ಬಗ್ಗೆ ಆತನ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದು, ಜೈಲಿನಲ್ಲಿ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಅಬಕಾರಿ ಅಧಿಕಾರಿಗಳ ದಾಳಿ – ಜಮೀನಿನಲ್ಲಿ ಅಡಗಿಸಿಟ್ಟಿದ್ದ 70 ಲಕ್ಷ ಮೌಲ್ಯದ ಸಿಹೆಚ್ ಪೌಡರ್ ಜಪ್ತಿ

Share This Article