ಬಾಗಲಕೋಟೆಯಲ್ಲಿ ದಾಖಲೆಯಿಲ್ಲದ 5 ಕೋಟಿ ರೂ. ಹಣ ಜಪ್ತಿ

Public TV
1 Min Read

ಬಾಗಲಕೋಟೆ: ದಾಖಲೆಯಿಲ್ಲದೆ ಹುಬ್ಬಳ್ಳಿಯಿಂದ ಮುಧೋಳ ಮಾರ್ಗವಾಗಿ ಸಾಗಿಸುತ್ತಿದ್ದ 5 ಕೋಟಿ ರೂ. ಹಣವನ್ನು ಚುನಾವಣಾಧಿಕಾರಿಗಳು, ಫ್ಲೈಯಿಂಗ್‌ ಸ್ಕ್ವಾಡ್‌ (Flying Squad) ಹಾಗೂ ಲೋಕಾಪುರ ಪೊಲೀಸರು ಜಪ್ತಿ ಮಾಡಿದ್ದಾರೆ.

ಹಣ ಸಾಗಿಸುವ ಬೊಲೆರೋ (Bolero) ವಾಹನದಲ್ಲಿ ಶುಕ್ರವಾರ ರಾತ್ರಿ ಹುಬ್ಬಳ್ಳಿ ಯೂನಿಯನ್ ಬ್ಯಾಂಕಿನಿಂದ (Union Bank) ಮುಧೋಳ ಯೂನಿಯನ್ ಬ್ಯಾಂಕ್‌ಗೆ 5 ಕೋಟಿ ರೂ. ಹಣವನ್ನು ಸಾಗಿಸಲಾಗುತ್ತಿತ್ತು. ಲೋಕಾಪುರ ಬಳಿಯಿರುವ ಲಕ್ಷಾನಟ್ಟಿ ಚೆಕ್‌ಪೋಸ್ಟ್‌ನಲ್ಲಿ ವಾಹನ ತಪಾಸಣೆ ವೇಳೆ ಹಣ ಸಾಗಾಟ ಕಂಡುಬಂದಿದೆ. ಇದನ್ನೂ ಓದಿ: ಸಿಎಂ ಮನೆ ಮುಂದಿನ ರಸ್ತೆಯಲ್ಲೇ 10 ಲಕ್ಷ ನಗದು ಹಣ ಪತ್ತೆ..!

ಈ ಹಣ ಯೂನಿಯನ್ ಬ್ಯಾಂಕ್‌ಗೆ ಸೇರಿದ್ದು ಎಂಬ ಮಾಹಿತಿ ನೀಡಿದರೂ ಸಹ ಸಮರ್ಪಕ ದಾಖಲೆಯಿಲ್ಲದ ಹಿನ್ನೆಲೆ ಹಣವನ್ನು ಜಪ್ತಿಪಡಿಸಿಕೊಂಡು ಕಾರಿನಲ್ಲಿದ್ದ ಐವರನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತು ಅಧಿಕಾರಿಗಳು ಹೆಚ್ಚಿನ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ನಕಲಿ ಪಾಸ್‌ಪೋರ್ಟ್‌ ಬಳಸಿ ವಿದೇಶಕ್ಕೆ ಹಾರಲು ಸಂಚು ರೂಪಿಸಿದ್ದ ಆರೋಪಿ ಅಂದರ್‌

Share This Article