ಹಳ್ಳದಲ್ಲಿ‌ ಕೊಚ್ಚಿ ಹೋಗಿದ್ದ ಒಂದೇ ಕುಟುಂಬದ ಮೂವರ ಮೃತದೇಹಗಳು ಪತ್ತೆ

Public TV
1 Min Read

ಬೀದರ್ : ಧಾರಾಕಾರ ಅಕಾಲಿಕ ಮಳೆಯಿಂದಾಗಿ (Rain) ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಮೂವರ ಮೃತದೇಹಗಳು ಪತ್ತೆಯಾದ ಘಟನೆ ಬೀದರ್‌ (Bidar) ಜಿಲ್ಲೆಯಲ್ಲಿ ನಡೆದಿದೆ.

ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಹೆಡಗಾಪೂರ್ ಗ್ರಾಮದ ಬಳಿ ಘಟನೆ ನಡೆದಿದೆ. ಸುನಂದಾ (45), ಮಗ ಸುಮಿತ್ (11), ಹಾಗೂ ಐಶ್ವರ್ಯ (16) ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ‌‍‌‌. ಭಾನುವಾರ ಕೃಷಿ ಕೆಲಸಕ್ಕಾಗಿ ನಾಲ್ವರು ಜಮೀನು ಕೆಲಸಕ್ಕೆ ಹೋಗಿ ಮನೆಗೆ ವಾಪಸಾಗುವಾಗ ಹಳ್ಳದಲ್ಲಿ ನೀರಿನ ರಭಸಕ್ಕೆ ತಾಯಿ ಹಾಗೂ ಇಬ್ಬರು ಮಕ್ಕಳು‌ ಸೇರಿದಂತೆ ಒಂದೇ ಕುಟುಂಬದ ಮೂವರು ಕೊಚ್ಚಿ ಹೋಗಿದ್ದಾರೆ. ಆದರೆ ಸುನಂದಾ ಪತಿ ಈಜಿ ದಡ ಸೇರಿದರು. ಇದನ್ನೂ ಓದಿ: ತಪ್ಪಿ ಮೋದಿಯತ್ತ ಎಸೆದ ಮೊಬೈಲ್ ಮರಳಿ ಮಹಿಳೆಯ ಕೈಗೆ ಸಿಕ್ತು!

ಘಟನೆಯಾದ ಸ್ಥಳದಿಂದ 1 ಕಿ.ಮೀ ದೂರದಲ್ಲಿ ಮೃತದೇಹಗಳು ಪತ್ತೆಗಳು ಪತ್ತೆಯಾಗಿದ್ದು, ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಭಾನುವಾರ ಸಂಜೆಯಿಂದ ರಾತ್ರಿವರೆಗೆ ಅಗ್ನಿ ಶಾಮದಳದ ಸಿಬ್ಬಂದಿ ಶೋಧ ಕಾರ್ಯ ನಡೆಸಿದರು. ಆದರೂ ಮೃತದೇಹಗಳು ಪತ್ತೆಯಾಗಿರಲಿಲ್ಲ. ಸೋಮವಾರ ಬೆಳಗಿನ ಜಾವ ಮತ್ತೆ ಶೋಧ ಕಾರ್ಯ ಮುಂದುವರಿಸಿದಾಗ ಮೂವರ ಮೃತದೇಹಗಳು ಪತ್ತೆಯಾಗಿದ್ದು, ಠಾಣಾಕೂಸುನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ ನಟಿ ರಮ್ಯಾ

Share This Article