ನಟಿ ಮೇಘನಾ ರಾಜ್ ಹುಟ್ಟು ಹಬ್ಬಕ್ಕೆ ತತ್ಸಮ ತದ್ಭವ ಪೋಸ್ಟರ್ ರಿಲೀಸ್

Public TV
2 Min Read

ದುವೆ ನಂತರ ಸಿನಿಮಾ ರಂಗದಿಂದ ದೂರ ಉಳಿದಿದ್ದ ನಟಿ ಮೇಘನಾ ರಾಜ್ (Meghana Raj) ‘ತತ್ಸಮ ತದ್ಬವ’ (Tatsama Tadbhava)  ಸಿನಿಮಾ ಮೂಲಕ ಮತ್ತೆ ಕಮ್ ಬ್ಯಾಕ್ ಮಾಡಿದ್ದರು. ಮೊನ್ನೆಯಷ್ಟೇ ಈ ಸಿನಿಮಾದ ಸಂಪೂರ್ಣ ಚಿತ್ರೀಕರಣ ಕೂಡ ಮುಗಿಸಿದ್ದರು. ಇಂದು ಮೇಘನಾ ರಾಜ್ ಹುಟ್ಟುಹಬ್ಬ (Birthday). ಹಾಗಾಗಿ ತತ್ಸಮ ತದ್ಭವ ಚಿತ್ರತಂಡ ಹುಟ್ಟುಹಬ್ಬಕ್ಕಾಗಿ ಅವರ ಪೋಸ್ಟರ್ (Poster)ರಿಲೀಸ್ ಮಾಡಿದೆ.

‘ನಿಜವಾದ ಸ್ನೇಹಿತರು ಯಾವಾಗಲೂ ಜೊತೆಗಿರುತ್ತಾರೆ. ಅಂತಹ ಸ್ನೇಹಿತರು ನನಗಿದ್ದಾರೆ. ನನಗಾಗಿ ಈ ಸಿನಿಮಾ ಮಾಡಿದ್ದಾರೆ. ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮರು ಪ್ರವೇಶ ಮಾಡಿದ್ದೇನೆ. ಪನ್ನಗ ಭರಣ ಹಾಗೂ ಸ್ಪೂರ್ತಿ ಅನಿಲ್ ನಿರ್ಮಾಣ ಮಾಡಿದ್ದಾರೆ. ವಿಶಾಲ್ ಆತ್ರೇಯ ಒಳ್ಳೆಯ ಕಥೆ ಮಾಡಿಕೊಂಡು ನಿರ್ದೇಶನ ಮಾಡಿದ್ದಾರೆ. ಒಟ್ಟಾರೆಯಾಗಿ ಹೇಳಬೇಕೆಂದರೆ ಈವರೆಗೂ ನಾನು ಇಂತಹ ಪಾತ್ರ ಮಾಡಿಲ್ಲ. ಮುಂದೆ ಮಾಡುತ್ತೀನೊ, ಇಲ್ಲವೊ? ಗೊತ್ತಿಲ್ಲ ಎಂದು ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು  ಮೇಘನಾ ರಾಜ್.

ನನಗೆ ನಿರ್ದೇಶಕರು ಕಥೆ ಹೇಳಿದಾಗ ಬಹಳ ಇಷ್ಟವಾಯಿತು. ಕಥೆಯಲ್ಲಿ  ಒಂದು ಮುಖ್ಯಪಾತ್ರ ಬರುತ್ತದೆ. ಈ ಪಾತ್ರ ಯಾರು ಮಾಡುತ್ತಿದ್ದಾರೆ ಎಂದು ಕೇಳಿದೆ. ಅವರು ನೀವೇ ಮಾಡುತ್ತಿದ್ದೀರ ಎಂದರು. ಸ್ನೇಹಿತರ ಸಿನಿಮಾ‌ದಲ್ಲಿ ಅಭಿನಯಿಸಿದ ಖುಷಿಯಿದೆ  ಎಂದು ಪ್ರಜ್ವಲ್ ದೇವರಾಜ್ (Prajwal Devaraj) ಮಾತನಾಡಿ ಮೇಘನಾ ಚಿತ್ರಕ್ಕೆ ಸಾಥ್ ನೀಡಿದ್ದಾರೆ. ಇದನ್ನೂ ಓದಿ:ಪ್ರೀತಿಯಿಂದ ಪ್ರಭಾಸ್‌ಗೆ ಅನುಷ್ಕಾ ಶೆಟ್ಟಿ ಏನೆಂದು ಕರೀತಾರೆ ಗೊತ್ತಾ?

ಇದೊಂದು ಇನ್ವೆಸ್ಟಿಕೇಶನ್ ಕ್ರೈಮ್ ಥ್ರಿಲ್ಲರ್. ಕನ್ನಡದಲ್ಲಿ ಇಂತಹ ಕಥೆ ಬಂದಿರುವುದು ಅಪರೂಪ. ನೋಡುಗರಿಗೂ ಇಷ್ಟವಾಗಬಹುದೆಂಬ ನಂಬಿಕೆಯಿದೆ ಎಂದಿರುವ ನಿರ್ದೇಶಕ ವಿಶಾಲ್ ಆತ್ರೇಯ,  ಸಂಪೂರ್ಣ ಚಿತ್ರೀಕರಣ ಮುಗಿಸಿ, ರೀರೆಕಾರ್ಡಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಚುನಾವಣೆ ಮುಗಿದ ನಂತರ ಸಿನಿಮಾ ಬಿಡುಗಡೆ ಮಾಡುವುದಾಗಿ ನಿರ್ಮಾಪಕ ಪನ್ನಗ ಭರಣ (Pannagabharana)ತಿಳಿಸಿದ್ದಾರೆ.

ನಟಿ ಶ್ರುತಿ ಕೂಡ ಈ ಸಿನಿಮಾದಲ್ಲಿ ಮಹತ್ವದ ಪಾತ್ರ ಮಾಡಿದ್ದು, ‘ಸಮಾಜದಲ್ಲಿ ಯಾವುದೇ ಹೆಣ್ಣಿಗಾದರೂ ಅನುಕಂಪಕ್ಕಿಂತ, ಅವಕಾಶ ಕೊಡುವುದು ಮುಖ್ಯ. ಮೇಘನಾ ರಾಜ್ ವಿಷಯದಲ್ಲಿ, ಅವರ ಸ್ನೇಹಿತರೆಲ್ಲರೂ ಸೇರಿ ಅವರ ರೀ ಎಂಟ್ರಿಗೆ ಒಳ್ಳೆಯ ಅವಕಾಶ ಕಲ್ಪಿಸಿದ್ದಾರೆ. ನಾನು ಈ ಚಿತ್ರದಲ್ಲಿ ಮನಶಾಸ್ತ್ರಜ್ಞೆಯಾಗಿ ಕಾಣಿಸಿಕೊಂಡಿದ್ದೇನೆ’ ಎಂದಿದ್ದಾರೆ.

Share This Article