ಮಣಿಪುರ ಧಗಧಗ – ಪರಿಸ್ಥಿತಿ ಕೈಮೀರಿದರೆ ಕಂಡಲ್ಲಿ ಗುಂಡು ಹಾರಿಸಿ: ಸರ್ಕಾರ ಆದೇಶ

Public TV
1 Min Read

ಇಂಫಾಲ್: ಎಲ್ಲಾ ರೀತಿಯ ಎಚ್ಚರಿಕೆ, ಸಮಂಜಸವಾದ ಬಲ ಪ್ರಯೋಗಕ್ಕೂ ಜಗ್ಗದೇ ಹೋದರೆ ಶೂಟೌಟ್‌ ಮಾಡಿ ಎಂದು ಅಧಿಕಾರಿಗಳಿಗೆ ಮಣಿಪುರ (Manipur violence) ಸರ್ಕಾರ ಆದೇಶ ಹೊರಡಿಸಿದೆ.

ಪ್ರತಿಭಟನಾಕಾರರನ್ನು ಎಲ್ಲಾ ರೀತಿಯಲ್ಲೂ ಮನವೊಲಿಸಿ, ಎಚ್ಚರಿಕೆ ನೀಡಿ, ಸಮಂಜಸವಾದ ಬಲ ಪ್ರಯೋಗ ಮಾಡಿ. ಇದ್ಯಾವುದಕ್ಕೂ ಬಗ್ಗದೇ ಹೋದರೆ, ವಿಪರೀತ ಪರಿಸ್ಥಿತಿ ಪ್ರಕರಣಗಳಲ್ಲಿ ಗುಂಡು ಹಾರಿಸಿ ಎಂದು ಎಲ್ಲಾ ಜಿಲ್ಲಾ ಮ್ಯಾಜಿಸ್ಟ್ರೇಟ್‌, ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌ ಮತ್ತು ಎಲ್ಲಾ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್‌ಗಳಿಗೆ ಆದೇಶಿಸಿದೆ. ಇದನ್ನೂ ಓದಿ: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ – ಇಂಟರ್‌ನೆಟ್ ಸ್ಥಗಿತ, ಸ್ಥಳದಲ್ಲಿ ಸೇನೆ

ರಾಜ್ಯದಲ್ಲಿ ಕ್ಷಣಕ್ಷಣವೂ ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಅಲ್ಲದೇ ರಾಜಧಾನಿ ಇಂಫಾಲ್‌ಗೂ ಹರಡುತ್ತಿದೆ. ಇದರಿಂದ ಎಚ್ಚೆತ್ತ ಸರ್ಕಾರ, ಭದ್ರತೆಯನ್ನು ಬಲಪಡಿಸಲು ಸೂಚನೆ ನೀಡಿದೆ. 55 ಸೇನಾ ಕಾಲಂಗಳನ್ನು ನಿಯೋಜಿಸಲಾಗಿದೆ.

ಮಣಿಪುರದಲ್ಲಿ ಎಸ್‌ಟಿ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಹಿಂಸಾಚಾರ ಭುಗಿಲೆದ್ದಿದೆ. ಮೇಟಿ ಸಮುದಾಯವನ್ನು ಎಸ್‌ಟಿ ಮೀಸಲಾತಿಗೆ ಸೇರಿಸಬೇಕು ಎಂದು ಪ್ರತಿಭಟನೆಗಳು ನಡೆಯುತ್ತಿವೆ. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, 8 ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಅಲ್ಲದೇ ಇಂಟರ್‌ನೆಟ್‌ ಸೇವೆಯನ್ನೂ ಸ್ಥಗಿತಗೊಳಿಸಲಾಗಿದೆ. ಇದನ್ನೂ ಓದಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾ ಹೆಲಿಕಾಪ್ಟರ್ ಪತನ

Share This Article