ಹಾಡಹಗಲೇ ಗುಂಡೇಟು – ಮಹಾನಗರ ಪಾಲಿಕೆಯ ಸದಸ್ಯೆಯ ಪತಿಯ ಬರ್ಬರ ಹತ್ಯೆ

Public TV
1 Min Read

ವಿಜಯಪುರ: ಮಹಾನಗರಪಾಲಿಕೆ (Municipal Corporation) ಸದಸ್ಯೆಯ ಪತಿಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆಗೈದ ಘಟನೆ ವಿಜಯಪುರದಲ್ಲಿ (Vijayapura) ಶನಿವಾರ ನಡೆದಿದೆ.

ವಿಜಯಪುರದ ವಾರ್ಡ್ ನಂಬರ್ 19ರ ಪಾಲಿಕೆ ಸದಸ್ಯೆ ನಿಶಾತ್ ಹೈದರ್ ನದಾಫ್ ಅವರ ಪತಿ ರೌಡಿಶೀಟರ್ ಹೈದರ್ ನದಾಫ್ ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ವ್ಯಕ್ತಿ. ನಗರದ ಚಾಂದಪುರ (Chandapur) ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ದುಷ್ಕರ್ಮಿಗಳು ನದಾಫ್ ಮೇಲೆ ಆರು ಸುತ್ತು ಗುಂಡು ಹಾರಿಸಿದ್ದು, ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಾಡಹಗಲೇ ಈ ಶೂಟೌಟ್ ನಡೆದಿದ್ದು ಜನರನ್ನು ಬೆಚ್ಚಿ ಬೀಳಿಸಿದೆ. ಇದನ್ನೂ ಓದಿ: ಸೇನಾ ವಾಹನದ ಮೇಲೆ ದಾಳಿ – ಓರ್ವ ಉಗ್ರನ ಹತ್ಯೆ

ಘಟನೆ ಜಲನಗರ (Jalnagar) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಎಸ್ಪಿ ಆನಂದಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಾರಿಯಾಗಿರುವ ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಮೃತನ ಕುಟಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಜಮೀನು ರಸ್ತೆ ವಿವಾದ, ಎರಡು ಕುಟುಂಬಗಳ ಮಾರಾಮಾರಿ – ಕೊಲೆಯಲ್ಲಿ ಅಂತ್ಯ

Share This Article